ರಥಬೀದಿಯ ಸರ್ಕಾರಿ ಕಾಲೇಜಿನಲ್ಲಿ ಯೋಗ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನೆ
Thursday, August 7, 2025
ಮಂಗಳೂರು: ಇಲ್ಲಿಯ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆ.7 ರಂದು ಯೋಗ ಸರ್ಟಿಫಿಕೇಟ್ ಕೋರ್ಸ್‌ನ್ನು ಮಂಗಳೂರು ವಿಶ್ವವಿದ್ಯಾಲಯದ ಯೋಗ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಅಜಿತೇಶ್ ಉದ್ಘಾಟಿಸಿದರು.
ಬಳಿಕ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಯೋಗದ ತತ್ವಗಳು, ಆಧುನಿಕ ಬದುಕಿನಲ್ಲಿ ಯೋಗದ ಅನಿವಾರ್ಯತೆ ಮತ್ತು ಆರೋಗ್ಯದ ಮೇಲಿನ ಅದರ ಪ್ರಭಾವದ ಕುರಿತು ವಿಶ್ಲೇಷಣಾತ್ಮಕವಾಗಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಜಯಕಾರ ಭಂಡಾರಿ ಎಂ. ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ಕುರಿತು ಪ್ರೇರಣಾದಾಯಕ ಭಾಷಣ ನೀಡಿದರು.
ಈ ಸಂದರ್ಭದಲ್ಲಿ ಆಂತರಿಕ ಗುಣಮಟ್ಟ ಖಾತೆಯ ಸಂಯೋಜಕ ದೇವಿ ಪ್ರಸಾದ್, ಸಹ ಸಂಯೋಜಕಿ ಡಾ. ಜ್ಯೋತಿಪ್ರಿಯಾ, ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ಶುಭ ಮತ್ತು ಡಾ. ಅಪರ್ಣ ಆಳ್ವ ಉಪಸ್ಥಿತರಿದ್ದರು.
