ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ  ವ್ಯಾಪಾರಿಯ ಅಪಹರಿಸಿ ದರೋಡೆ: ಐವರು ವಶಕ್ಕೆ

ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ವ್ಯಾಪಾರಿಯ ಅಪಹರಿಸಿ ದರೋಡೆ: ಐವರು ವಶಕ್ಕೆ


ಮಂಗಳೂರು: ಸೆಂಟ್ರಲ್ ರೈಲ್ವೆ ನಿಲ್ದಾಣದ ಸಮೀಪ ಇನ್ನೋವಾ ಕಾರಿನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಬಂದು ಚಿನ್ನದ ವ್ಯಾಪಾರಿಯೊಬ್ಬರನ್ನು ಬಂಧಿಸುವ ನೆಪದಲ್ಲಿ ಕುಮಟಾಕ್ಕೆ ಅಪಹರಿಸಿ, ಹೆದರಿಸಿ 350 ಗ್ರಾಂ ತೂಕದ ಶುದ್ಧ ಬಂಗಾರದ ಗಟ್ಟಿಯನ್ನು ದರೋಡೆ ಮಾಡಿದ ಪ್ರಕರಣದ ಐವರು ಆರೋಪಿಗಳನ್ನು ಇಲ್ಲಿನ ಸಿಸಿಬಿ ಪೊಲೀಸರು ಪುಣೆಯಲ್ಲಿ ಸೋಮವಾರ ವಶಕ್ಕೆ ಪಡೆದಿದ್ದಾರೆ.

ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಪಿ (ಕಾನೂನು ಸುವ್ಯವಸ್ಥೆ) ಮಿಥುನ್ ಎಚ್.ಎನ್, ಆ.೧೩ರಂದು ಬುಧವಾರ ಬೆಳಿಗ್ಗೆ ಚಿನ್ನದ ವ್ಯಾಪಾರಿ ಭಾನುದಾಸ ಹರಿ ಥೋರಟ್ ಅವರು ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದ ಹತ್ತಿರದ ಕೈರಾಲಿ ಹೋಟೆಲ್ ಬಳಿ ಆಟೊ ರಿಕ್ಷಾಕ್ಕಾಗಿ ಕಾಯುತ್ತಿದ್ದರು. ಆಗ ಇನ್ನೋವಾ ಕಾರಿನಲ್ಲಿ ಬಂದ ಆರು ಜನ ಅಪರಿತರು, ಥೋರಟ್ ಅವರನ್ನು ಮಾತನಾಡಿಸಿ, ತಮ್ಮನ್ನು ಕಸ್ಟಮ್ಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡಿದ್ದರು. ’ನಿಮ್ಮ ವಿರುದ್ದ ದೂರು ಬಂದಿದೆ. ನಿಮ್ಮನ್ನು ವಿಚಾರಣೆ ಮಾಡಬೇಕು’ ಎಂದು ತಿಳಿಸಿದ್ದರು.

ನಮ್ಮೊಂದಿಗೆ ಬನ್ನಿ’ ಎಂದು ಥೋರಟ್ ಅವರನ್ನು ಗದರಿಸಿ, ಬಲವಂತವಾಗಿ ಬಿಳಿ ಬಣ್ಣದ ಇನ್ನೋವಾ ಕಾರಿನಲ್ಲಿ ಕೂರಿಸಿಕೊಂಡಿದ್ದರು. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಡುಪಿ ಮಾರ್ಗವಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾಕ್ಕೆ ಕರೆದೊಯ್ದಿದ್ದರು. ಅಲ್ಲಿ ಥೋರಟ್ ಅವರನ್ನು ಬೆದರಿಸಿ, ಆವರ ಬಳಿ ಇದ್ದ ಸುಮಾರು 35 ಲಕ್ಷ ಬೆಲೆಯ 350 ಗ್ರಾಂ ತೂಕದ ಬಂಗಾರದ ಗಟ್ಟಿಗಳನ್ನು ದರೋಡೆ ಮಾಡಿದ್ದರು. ಬಳಿಕ ಥೋರಟ್ ಅವರನ್ನು ಕುಮಟಾ ತಾಲೂಕಿನ ಶಿರಸಿ ಬಳಿಯ ಅಂತ್ರವಳ್ಳಿ ಎಂಬಲ್ಲಿ ಬಿಟ್ಟು ಪರಾರಿಯಾಗಿದ್ದರು. ಈ ಬಗ್ಗೆ ಥೋರಟ್ ಅವರು ಕುಮಟಾ ಠಾಣೆಗೆ ದೂರು ನೀಡಿದ್ದರು’ ಎಂದು ತಿಳಿಸಿದರು.

ಈ ಬಗ್ಗೆ ಕುಮಟಾ ಠಾಣೆಯಲ್ಲಿ ದಾಖಲಾದ ಎಫ್.ಐ.ಆರ್ ಅನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ದಕ್ಷಿಣ ಠಾಣೆಯಲ್ಲಿ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 310(2), 137(2), 204 ಅಡಿ ಪ್ರಕರಣ ದಾಖಲಾಗಿತ್ತು.’

ನಕಲಿ ಉತ್ಪನ್ನ ಮಾರಾಟ..

ಉಳ್ಳಾಲ ಠಾಣಾ ವ್ಯಾಪ್ತಿಯ ಸ್ಪೋರ್ಟ್ಸ್ ವಿನ್ನರ್ ಮಳಿಗೆ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾದೇವ್ ಸ್ಪೋರ್ಟ್ಸ್ ಸೆಂಟರ್ ಮಳಿಗೆಯಲ್ಲಿ ಕೊಸ್ಕೊ, ನಿವಿಯ ಮತ್ತು ಯೋನೆಕ್ಸ್ ಬ್ರಾಂಡ್ ಗಳ ಉತ್ಪನ್ನದ ಸೋಗಿನಲ್ಲಿ ಮಾರಾಟ ಮಾಡುತ್ತಿದ್ದ ಸುಮಾರು 300 ನಕಲಿ ಫುಟ್ ಬಾಲ್, ವಾಲಿಬಾಲ್ ಹಾಗೂ ಬ್ಯಾಡ್ಮಿಂಟನ್ ರಾಕೆಟ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಬ್ರ್ಯಾಂಡ್ ಉತ್ಪನ್ನಗಳ ಸೋಗಿನಲ್ಲಿ ನಕಲಿ ಕ್ರೀಡಾ ಪರಿಕರ ಮಾರಾಟ ಮಾಡುತ್ತಿರುವ ಬಗ್ಗೆ ಬ್ರ್ಯಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ದಕ್ಷಿಣ ಭಾರತದ ಪ್ರಾದೇಶಿಕ ಮುಖ್ಯಸ್ಥ ಸ್ಟೀಫನ್ ರಾಜ್ ದೂರು ನೀಡಿದ್ದರು. ಈ ಬಗ್ಗೆ ಉಳ್ಳಾಲ ಮತ್ತು ನಗರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article