ಕೃಷ್ಣ ಜನ್ಮಾಷ್ಟಮಿ: ಮದ್ಯದಂಗಡಿ ಮುಚ್ಚಲು ಆದೇಶ

ಕೃಷ್ಣ ಜನ್ಮಾಷ್ಟಮಿ: ಮದ್ಯದಂಗಡಿ ಮುಚ್ಚಲು ಆದೇಶ

ಮಂಗಳೂರು: ಜಿಲ್ಲೆಯಾದ್ಯಂತ ವಿವಿದೆಡೆ ಆಗಸ್ಟ್ 15 ರಿಂದ ಆಗಸ್ಟ್ 17 ರವರೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸಾರ್ವಜನಿಕ ಮೊಸರುಕುಡಿಕೆ, ಮೆರವಣಿಗೆ ಮತ್ತು ಕಾರ್ಯಕ್ರಮಗಳು ನಡೆಯಲಿದೆ. ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಶಾಂತಿ ಭಂಗವನ್ನುಂಟು ಮಾಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಸಂಭವನೀಯತೆಗಳಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮೆರವಣಿಗೆ ಪ್ರದೇಶಗಳಲ್ಲಿ ಆಯಾ ದಿನಗಳಂದು ಬಾರ್ ಮತ್ತು ವೈನ್ ಶಾಪ್‌ಗಳಲ್ಲಿ, ಮದ್ಯದಂಗಡಿಗಳಲ್ಲಿ ಯಾವುದೇ ರೀತಿಯ ಅಮಲು ಪದಾರ್ಥ ಮಾರಾಟ ಮಾಡದಂತೆ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article