
ಬೋಳಿಯಾರ್ ಸರಕಾರಿ ಶಾಲೆಗೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್
Monday, August 4, 2025
ಮಂಗಳೂರು: ಬೋಳಿಯಾರ್ ಸರಕಾರಿ ಶಾಲೆಯ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ಡಿವೈಎಫ್‌ಐ ನೀಡಿದ ಮನವಿಗೆ ಸ್ಪಂದಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಇಂದು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಲೆಯ ಅವ್ಯವಸ್ಥೆಯನ್ನು ಸರಿಪಡಿಸಲು ಇಂದೇ ವರದಿ ಸಲ್ಲಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬೋಳಿಯಾರ್ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾರಾಣಿ, ಡಿವೈಎಫ್‌ಐ ಉಳ್ಳಾಲ ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ, ಉಪಾಧ್ಯಕ್ಷರಾದ ರಝಾಕ್ ಮುಡಿಪು, ರಫೀಕ್ ಹರೇಕಳ, ಇಬ್ರಾಹಿಂ ಮದಕ, ಅಬೂಬಕರ್ ಜಲ್ಲಿ, ಶಮೀರ್ ಜಾರದಗುಡ್ಡೆ, ರಿಯಾಝ್ ಕೆ.ಬಿ., ಸಿದ್ದೀಕ್ ಕೆ.ಕೆ., ಶಂಶೀರ್ ಓಕೆ, ನಿಯಾಝ್, ಮಿಸ್ಬಾಹ್, ಮರ್ಷಾದ್ ಉಪಸ್ಥಿತರಿದ್ದರು.