ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ

ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ

ಮಂಗಳೂರು: ಆಕಾಂಕ್ಷಾ ಚಾರಿಟೆಬಲ್ ಟ್ರಸ್ಟ್ ಮತ್ತು ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಸಹಯೋಗದಲ್ಲಿ ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’ ಆಯೋಜಿಸಲಾಗುತ್ತಿದೆ.

ಜಿಲ್ಲೆಯ ಗ್ರಾಮೀಣ ಶಾಲೆಗಳ ವಿದ್ಯಾರ್ಥಿಗಳಲ್ಲಿ ವೈಜ್ಞ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ವಿಜ್ಞಾನ ಮಾದರಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಉತ್ತಮ ಬದುಕಿಗೆ ವಿಜ್ಞ್ಞಾನ ಎಂಬ ವಿಷಯದಲ್ಲಿ ಅಡಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಉಪ್ಪಿನಂಗಡಿ, ಪುತ್ತೂರು, ಮೂಡುಬಿದಿರೆ ಭಾಗದಲ್ಲಿ ಈಗಾಗಲೇ 20 ಶಾಲೆಗಳಲ್ಲಿ ಆಯೋಜಿಸಿರುವ ಸ್ಪರ್ಧೆಯಲ್ಲಿ 600ಕ್ಕೂ ಅಽಕ ಸ್ಪಽಗಳು ಭಾಗವಹಿಸಿದ್ದಾರೆ. ಇನ್ನೂ 20 ಶಾಲೆಗಳಲ್ಲಿ ಸ್ಪರ್ಧೆ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಟ್ರಸ್ಟ್ ಯೋಜನಾ ವ್ಯವಸ್ಥಾಪಕ ಹೇಮಂತ್ ತಿಳಿಸಿದರು.

ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ಸ್ಪರ್ಧೆ ಆಯೋಜಿಸಲಾಗುತ್ತದೆ. ಪ್ರತಿ ತಂಡದಲ್ಲಿ ಇಬ್ಬರು ಸದಸ್ಯರಿಗೆ ಭಾಗವಹಿಸಲು ಅವಕಾಶದೆ. ಮೊದಲ ಮೂರು ಸ್ಥಾನ ಗಳಿಸಿದ ತಂಡಗಳಿಗೆ ಅನುಕ್ರಮವಾಗಿ 1,000 ರೂ. 750 ರೂ. ಮತ್ತು 500 ರೂ. ಬಹುಮಾನ ದೊರೆಯಲಿದ್ದು, ಈ ತಂಡಗಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಲಿವೆ. ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಕ್ಕೆ ಸಮಾಧಾನಕರ ಬಹುಮಾನ ದೊರೆಯಲಿದೆ ಎಂದರು.

ಜಿಲ್ಲಾ ಮಟ್ಟದ ಸ್ಪರ್ಧೆ ಅಕ್ಟೋಬರ್ ತಿಂಗಳಲ್ಲಿ ಆಯೋಜಿಸಲಾಗುವುದು. 100ಕ್ಕೂ ಅಽಕ ತಂಡಗಗಳು ಭಾಗವಹಿಸಲಿವೆ. ವಿಜೇತರಿಗೆ 70 ಸಾವಿರ ರೂ. ಮೌಲ್ಯದ ವಿದ್ಯಾರ್ಥಿ ವೇತನ ಬಹುಮಾನ ದೊರೆಯಲಿದೆ. ಜಿಲ್ಲೆಯ ಗ್ರಾಮೀಣ ಭಾಗದ ಅನುದಾನಿತ, ಸರಕಾರಿ ಶಾಲೆಗಳು ಶಾಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಒಂದು ವಾರ ಮುಂಚಿತವಾಗಿ ನೋಂದಣಿ ಮಾಡಿಸಬೇಕು. ನೋಂದಣಿಗಾಗಿ 8861932512/9483768512 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದರು.

ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಆಪರೇಷನ್ಸ್ ಲೀಡ್ ಜೋಬಿನ್ ಜೋಸೆಫ್ ಅವರು ಮಾತನಾಡಿ, ಸಂಸ್ಥೆಯ ಸಿಎಸ್‌ಆರ್ ಯೋಜನೆಯಡಿ, ಆಕಾಂಕ್ಷಾ ಚಾರಿಟೆಬಲ್ ಟ್ರಸ್ಟ್  ಸಹಭಾಗಿತ್ವದಲ್ಲಿ ವಿಜ್ಞಾನ ಮೇಳ ಆಯೋಜಿಸಲಾಗುತ್ತಿದೆ ಎಂದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article