‘ದೇಶ ವಿಭಜನೆಯ ಕರಾಳ ದಿನ’ ಸಂವಾದ ಕಾರ್ಯಕ್ರಮ
ಈ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾಜಿ ವಿಧಾನಪರಿಷತ್ ಸದಸ್ಯ ಬಾಲಕೃಷ್ಣ ಭಟ್ ಅವರು ಭಾಗವಹಿಸಿ, ದೇಶವಿಭಜನೆಯ ಕರಾಳ ದಿನದ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಭರತನಾಟ್ಯದಲ್ಲಿ ಗಿನ್ನೆಸ್ ದಾಖಲೆ ನಿರ್ಮಿಸಿದ ರೇಮೋನ ಪಿರೇರಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ವೇತಾ ಕುಮಾರಿ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಕಾರ್ಯದರ್ಶಿ ಜೆಸ್ಸಿಲ್ ಡಿ’ಸೋಜ, ಜಿಲ್ಲಾ ವಕ್ತಾರ ರಾಜ್‌ಗೋಪಾಲ್ ರೈ, ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ಜೋಗಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಡಾ. ಮಂಜುಳಾ ಅನಿಲ್ ರಾವ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ಟಿ.ಎ. ಶಾನವಾಜ್, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಮಾಜಿ ಮಹಾನಗರ ಪಾಲಿಕೆ ಸದಸ್ಯರು, ಹಿರಿಯ ಕಾರ್ಯಕರ್ತರು, ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ವಕ್ತಾರ ಅರುಣ್ ಜಿ.ಶೇಟ್ ಅವರು ವಂದೇಮಾತರಂ ಹಾಡಿದರು. ರಾಜ್ಯ ಶಿಕ್ಷಣ ಪ್ರಕೋಷ್ಠ ಸಮಿತಿ ಸದಸ್ಯ ಮುರಳಿ ಹೊಸಮಜಲು ಸ್ವಾಗತಿಸಿದರು. ಜಿಲ್ಲಾ ಪ್ರಕೋಷ್ಠ ಸಂಯೋಜಕ ಸುಧೀರ್ ಶೆಟ್ಟಿ ಕಣ್ಣೂರು ಕಾರ್ಯಕ್ರಮದಲ್ಲಿ ಪ್ರಸ್ತಾವಿಸಿದರು. ಕೈಗಾರಿಕಾ ಪ್ರಕೋಷ್ಠ ಜಿಲ್ಲಾ ಸಂಚಾಲಕ ಸತೀಶ್ ಕರ್ಕೇರ ವಂದಿಸಿದರು. ಜಿಲ್ಲಾ ಉಪಾಧ್ಯಕ್ಷೆ ಪೂಜಾ ಪ್ರಶಾಂತ್ ಪೈ ಕಾರ್ಯಕ್ರಮ ನಿರೂಪಿಸಿದರು.
