ಧರ್ಮಸ್ಥಳದಲ್ಲಿ ಧರ್ಮ ಜಾಗರಣ ಸಮಾವೇಶ: ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಘೋಷಣೆ

ಧರ್ಮಸ್ಥಳದಲ್ಲಿ ಧರ್ಮ ಜಾಗರಣ ಸಮಾವೇಶ: ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಘೋಷಣೆ

ಮಂಗಳೂರು: ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಸಂಬಂಧಿಸಿ ಸುಳ್ಳು ಸುದ್ದಿಗಳ ಮೂಲಕ ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ, ಧರ್ಮಸ್ಥಳ ಕ್ಷೇತ್ರದ ಕುರಿತು ವ್ಯವಸ್ಥಿತವಾಗಿ ನಡೆಯುತ್ತಿರುವ ಅಪಪ್ರಚಾರ ಹಾಗೂ ಕೆಲ ಮಾಧ್ಯಮಗಳು ಹರಡುತ್ತಿರುವ ಸುಳ್ಳು ಸುದ್ದಿಗಳ ಕುರಿತು ಜನಜಾಗೃತಿಗಾಗಿ ಶೀಘ್ರದಲ್ಲಿ ಧರ್ಮಸ್ಥಳದಲ್ಲಿ ಧರ್ಮ ಜಾಗರಣ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದೆ.

ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬಸ್ಥರ ಅವಹೇಳನ ಖಂಡನೀಯ. ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆದಿರುವ ಷಡ್ಯಂತ್ರ ಖಂಡಿಸಿ ಸಮಾವೇಶ ಏರ್ಪಡಿಸಲಾಗುತ್ತಿದೆ. ಮುಂದಿನ ಎರಡು ದಿನದೊಳಗೆ ಸಮಾವೇಶದ ದಿನಾಂಕ ಪ್ರಕಟಿಸಲಾಗುವುದು. ರಾಜ್ಯದ ಎಲ್ಲ ಭಾಗಗಳಿಂದ ಕ್ಷೇತ್ರದ ಭಕ್ತರು ಆಗಮಿಸಲಿದ್ದಾರೆ ಎಂದು ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಸಂಚಾಲಕ ವಸಂತ ಗಿಳಿಯಾರ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅನಾಮಿಕ ವ್ಯಕ್ತಿಯೊಬ್ಬನ ದೂರಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಚಿಸಿದ ಎಸ್‌ಐಟಿಯಲ್ಲಿ ದಕ್ಷ ಅಧಿಕಾರಿಗಳಿದ್ದು, ಅವರೆಲ್ಲರೂ ಅನಾಮಿಕ ವ್ಯಕ್ತಿಯ ದೂರು ಹಾಗೂ ಹೇಳಿಕೆಯಂತೆ ತನಿಖೆ ಕೈಗೊಂಡಿದ್ದಾರೆ. ಅನಾಮಿಕ ವ್ಯಕ್ತಿ ತೋರಿಸಿದ 13 ಸ್ಥಳಗಳ ಪೈಕಿ ಒಂದು ಸ್ಥಳ ಮಾತ್ರ ಇನ್ನು ಪರಿಶೀಲಿಸಲು ಬಾಕಿ ಇದೆ, 12 ಸ್ಥಳವನ್ನು ಪರಿಶೀಲಿಸಲಾಗಿದೆ. ಅದರಲ್ಲಿ ಒಂದರಲ್ಲಿ ಮಾತ್ರ ಒಂದು ಗಂಡಸಿನ ಶವದ ಅಸ್ಥಿಪಂಜರ ಸಿಕ್ಕಿದೆ ಎನ್ನಲಾಗುತ್ತಿದೆ. ಆದರೆ, ಕೆಲವು ಅನಧಿಕೃತವಾದ ಮಾಧ್ಯಮಗಳಲ್ಲಿ ಹಲವು ಶವಗಳು ಸಿಕ್ಕಿವೆ ಎಂದು ಬಿತ್ತರಿಸಲಾಗುತ್ತಿದೆ. ಕೆಲವು ಯೂಟ್ಯೂಬ ಚಾನೆಲಗಳಲ್ಲಿ ಹಲವು ಶವಗಳು ಸಿಕ್ಕಿವೆ, ಅವುಗಳಲ್ಲಿ ಹೆಣ್ಣು ಮಕ್ಕಳ ಶವಗಳೂ ಇವೆ ಎಂಬ ಸುದ್ದಿಗಳನ್ನು ಬಿತ್ತರಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕವಾಗಿ ಗೊಂದಲ ಉಂಟಾಗುತ್ತಿದೆ ಎಂದು ಹೇಳಿದರು.

ಯೂಟ್ಯೂಬ ಚಾನೆಲ್ ಹಾಗೂ ಇತರ ಮಾಧ್ಯಮಗಳಲ್ಲಿ ಪ್ರಕಟಗೊಳ್ಳುತ್ತಿರುವ ಪರಿಸರದ ಅಶಾಂತಿಗೆ ಕಾರಣವಾಗುವ ಸುದ್ದಿಗಳು ಸತ್ಯವೇ ಅಥವಾ ಸುಳ್ಳೇ ಎಂಬುದನ್ನು ಎಸ್‌ಐಟಿ ಅಽಕಾರಿಗಳು ಸ್ಪಷ್ಟಪಡಿಸಬೇಕು. ಸುಳ್ಳು ಸುದ್ದಿಯಾಗಿದ್ದರೆ ಪ್ರಕಟಿಸಿದ ಯೂಟ್ಯೂಬ್ ಚಾನಲ್‌ಗಳ ಹಾಗೂ ಅದರ ಮಾಲೀಕರು, ಸಿಬ್ಬಂದಿ ಮೇಲೆ ಕಠಿಣ ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದರು.

ಎನ್‌ಐಎ ತನಿಖೆಗೆ ಆಗ್ರಹ..

ಧರ್ಮಸ್ಥಳ ವ್ಯಾಪ್ತಿಯಲ್ಲಿ ಹಲವು ಅತ್ಯಾಚಾರ ಹಾಗೂ ಕೊಲೆಗಳು ನಡೆದಿವೆ ಎಂದು ವ್ಯಾಪಕ ಅಪಪ್ರಚಾರ ನಡೆಸುತ್ತಿರುವ ಪ್ರಕರಣಕ್ಕೆ ವಿದೇಶದಿಂದ ಫಂಡಿಂಗ್ ಆಗಿದೆ ಎಂಬ ಸಂಶಯವಿದೆ. ಕೆಲ ಬೆಳವಣಿಗೆಗಳನ್ನು ಗಮನಿಸಿದರೆ ಈ ಪ್ರಕರಣ ಹಾಗೂ ಭಯೋತ್ಪಾದನಾ ಚಟುವಟಿಕೆಗಳಿಗೆ ಲಿಂಕ್ ಇದೆ ಅನಿಸುತ್ತದೆ. ನಕ್ಸಲರ ಹಿಟ್‌ಲೀಸ್ಟ್‌ನಲ್ಲಿ ಕೂಡ ಧರ್ಮಸ್ಥಳ ಕ್ಷೇತ್ರವಿತ್ತು. ಧರ್ಮಸ್ಥಳದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ನಡೆಸುವ ಸಂಚಿನ ಕುರಿತು ಕೂಡ ಸುದ್ದಿಯಾಗಿದೆ. ಧರ್ಮಸ್ಥಳ ಮತ್ತು ಧರ್ಮಾಽಕಾರಿಯ ವಿರುದ್ಧ ನಡೆಯುತ್ತಿರುವ ಅಪಪ್ರಚಾರವು ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಗುರಿಯಾಗಿಟ್ಟುಕೊಂಡು ನಿಷೇಽತ ಸಂಘಟನೆ ಪ್ರತಿನಿಽಗಳು ಒಳಗೊಂಡಿರುವ ಗುಂಪಿನ ವತಿಯಿಂದ ನಡೆಯುತ್ತಿರುವ ದಾಳಿಯ ಭಾಗವಾಗಿದೆ. ಆದ್ದರಿಂದ ಪ್ರಕರಣವನ್ನು ಎನ್‌ಐಎ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಸಮಿತಿ ಪ್ರಮುಖರಾದ ಶರತ್ ಶೆಟ್ಟಿ ವಡ್ಡರ್ಸೆ, ನಿಖಿಲ್ ನಾಯಕ್ ತೆಕ್ಕಟ್ಟೆ, ಮಹೇಶ್ ಬೈಲೂರು, ಪ್ರವೀಣ್ ಯಕ್ಷಿಮಠ, ರವೀಂದ್ರ ಹೇರೂರು, ಸಂದೀಪ್, ರವಿಚಂದ್ರ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article