ಎಸ್ಸಿಡಿಸಿಸಿ ಬ್ಯಾಂಕ್ನಲ್ಲಿ ಸ್ವಾತಂತ್ರ್ಯೋತ್ಸವ
Friday, August 15, 2025
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್)ನಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಣೆ ನಡೆಯಿತು.
ಕೊಡಿಯಾಲ್ ಬೈಲ್ನಲ್ಲಿರುವ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ದಕ್ಷಿಣ ಕನ್ನಡ ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್. ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಎಸ್ಸಿಡಿಸಿಸಿ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್ ಮಾತನಾಡಿ, ಸ್ವಾತಂತ್ರ್ಯೋತ್ಸವದ ದಿನ ಶಾಂತಿ, ಏಕತೆ ಮತ್ತು ಧೈರ್ಯವನ್ನು ಪ್ರತಿಬಿಂಬಿಸುವ ತ್ರಿವರ್ಣ ಧ್ವಜವು ಹೆಮ್ಮೆಯಿಂದ ಆಕಾಶದೆತ್ತರದಲ್ಲಿ ಹಾರುತ್ತದೆ. ಇಂತಹ ಸ್ಮರಣೀಯ ಪರ್ವ ಕಾಲದಲ್ಲಿ ದೇಶದ ವೀರ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುತ್ತಾ, ಸಿಬ್ಬಂದಿಗಳು ಬ್ಯಾಂಕಿನ ಕಾರ್ಯದಲ್ಲೂ ಸಂಘಟನಾತ್ಮಕವಾಗಿ ದುಡಿದು ಬ್ಯಾಂಕನ್ನು ಅಭಿವೃದ್ಧಿಯ ಪಥದತ್ತ ಮುನ್ನಡೆಸಬೇಕೆಂಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಹಿರಿಯ-ಕಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿ ಧ್ವಜ ವಂದನೆಗೈದರು.