
ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ನೀಡುತ್ತಿರುವ ರಾಜ್ಯಮಟ್ಟದ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಬೆಳ್ಳಿಪ್ರಕಾಶ್ ಅವರಿಂದ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್ ರಾಜೇಂದ್ರಕುಮಾರ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ. ಅವರು ಸ್ವೀಕರಿಸಿದರು.
23 ಬಾರಿ ಪ್ರಶಸ್ತಿ:
ನಿರಂತರ ಸಮಾಜಮುಖಿ ಸೇವೆಗಳೊಂದಿಗೆ ತನ್ನ ಗ್ರಾಹಕರಿಗೆ ಸಂತೃಪ್ತ ಸೇವೆಯನ್ನು ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ 2023-24ನೇ ಸಾಲಿನಲ್ಲಿ ಸರ್ವಾಂಗೀಣ ಪ್ರಗತಿಯೊಂದಿಗೆ ಗುರುತಿಸಿಕೊಂಡು, ಲೆಕ್ಕ ಪಲಿಶೋಧನೆಯಲ್ಲಿ ‘ಎ’ ವರ್ಗವನ್ನು ಪಡೆದು ಅಪೆಕ್ಸ್ ಬ್ಯಾಂಕ್ ನೀಡುವ ಪ್ರಥಮ ಪ್ರಶಸ್ತಿಗೆ ಆಯ್ಕೆಗೊಂಡಿರುತ್ತದೆ. ಮಾತ್ರವಲ್ಲ 23 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಪಡೆದ sahakarapatrike@gmail.com ಹೆಗ್ಗಳಿಕೆಗೂ ಎಸ್‌ಸಿಡಿಸಿಸಿ ಬ್ಯಾಂಕ್ ಪಾತ್ರವಾಗಿದೆ.
ಪ್ರಗತಿಪರ ಯೋಜನೆಗಳು:
ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಗತಿಪರ ಯೋಜನೆಗಳನ್ನು ಅನುಷ್ಠಾನಗೊಳಿಸಿ ಮಾದರಿ ಬ್ಯಾಂಕ್ ಎನಿಸಿಕೊಂಡಿದೆ. ತನ್ನ 113 ಶಾಖೆಗಳು ಸಂಪೂರ್ಣ ಗಣಕೀಕರಣಗೊಂಡ ಕೋರ್ ಬ್ಯಾಂಕಿಂಗ್‌ನಂತಹ ಹೊಸತನದ ಬ್ಯಾಂಕಿಂಗ್ ಸೇವೆಯನ್ನು ಗ್ರಾಹಕರಿಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಶಾಖೆಗಳ ಮೂಲಕ ನೀಡುತ್ತಿದೆ. ಮಾತ್ರವಲ್ಲ ಮಂಗಳೂರು ಮತ್ತು ಉಡುಪಿಯಲ್ಲಿ ಬ್ಯಾಂಕ್ ಆನ್ ವೀಲ್ ಎನ್ನುವ ಪರಿಕಲ್ಪನೆಯಲ್ಲಿ ಮೊಬೈಲ್ ಬ್ಯಾಂಕಿಂಗ್ ನಂತಹ ವಿನೂತನ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದೆ. ಇಂತಹ ಬ್ಯಾಂಕಿಂಗ್ ವ್ಯವಸ್ಥೆಯನ್ನು ರಾಜ್ಯ ಮಟ್ಟದಲ್ಲೇ ಪರಿಚಯಿಸಿದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎಂಬ ಮನ್ನಣಿಗೂ ಎಸ್‌ಸಿಡಿಸಿಸಿ ಬ್ಯಾಂಕ್ ಪಾತ್ರವಾಗಿರುತ್ತದೆ. ಕೃಷಿ ಸಾಲ ಮರುಪಾವತಿಯಲ್ಲಿ ಶೇಕಡಾ ನೂರರ ಸಾಧನೆಯನ್ನು ಕಳೆದ 30 ವರ್ಷಗಳಿಂದ ಮಾಡುತ್ತಿರುವುದು ರಾಷ್ಟ್ರೀಯ ದಾಖಲೆ ಆಗಿದೆ.
ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ದಕ್ಷ ಸಾರಥ್ಯದಲ್ಲಿ ಕಳೆದ 31 ವರ್ಷಗಳಿಂದ ಯಶಸ್ಸಿನ ಪಥದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಮುನ್ನಡೆಯನ್ನು ಕಾಣುತ್ತಿದೆ. ವರದಿ ವರ್ಷದಲ್ಲಿ ಬ್ಯಾಂಕಿಗೆ ಕೇಂದ್ರ ಸರಕಾರದ ಅಟಲ್ ಪಿಂಚಣಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಎಪಿವೈ ರಾಷ್ಟ್ರೀಯ ಪ್ರಶಸ್ತಿ ಬ್ಯಾಂಕಿಗೆ ಲಭಿಸಿದೆ.
ಬೆಂಗಳೂರಿನಲ್ಲಿ ಬುಧವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರು ಹಾಗೂ ನಿರ್ದೇಶಕರಾದ ಶಿವಾನಂದ ಎಸ್. ಪಾಟೀಲ್, ನಿರ್ದೇಶಕರುಗಳಾದ ಲಕ್ಷ್ಮಣ ಸಂಗಪ್ಪ ಸವದಿ, ಸಿದ್ಧಪ್ಪ ಕಲ್ಲಪ್ಪ ಸವದಿ, ಶರಣೇಗೌಡ ಬಯ್ಯಾಪುರ್, ಶಿವರಾಮ್ ಮಹಾಬಲೇಶ್ವರ ಹೆಬ್ಬಾರ್, ಡಾ. ಆರ್.ಎಂ. ಮಂಜುನಾಥ ಗೌಡ, ಎಸ್.ರವಿ, ಟಿ.ಎಂ. ಚಂದ್ರಶೇಖರಯ್ಯ, ಶಿವಾನಂದ ಅಪ್ಪಾಸಾಹೇಬ ಮಾನಕರ್, ಕೊಡಂದೇರ ಪಿ. ಗಣಪತಿ, ಉಮಾಕಾಂತ ನಾಗಮಾರಪಳ್ಳಿ, ಜಿ.ಎನ್. ಸ್ವಾಮಿ, ಅಮರಾವತಿ ಸಿ. ಅಶ್ವತ್, ಲಿಂಗರಾಜ್ ಎಸ್. ಚಪ್ಪರದಳ್ಳಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಎನ್. ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.