ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಗ್ರಹಣ ಸಮಾರಂಭ
Wednesday, August 20, 2025
ಮಂಗಳೂರು: ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಗ್ರಹಣ ಸಮಾರಂಭ ಇಂದು ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.
ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ನಗರ ಅಧ್ಯಕ್ಷೆಯಾಗಿ ಮಾಜಿ ಕಾರ್ಪೊರೇಟರ್ ಅಪ್ಪಿ ಹಾಗೂ ಗ್ರಾಮಾಂರ ಅಧ್ಯಕ್ಷೆಯಾಗಿ ಉಷಾ ಅಂಚನ್ ಅವರಿಗೆ ಕಾಂಗ್ರೆಸ್ ಧ್ವಜವನ್ನು ನೀಡುವ ಮೂಲಕ ಅಧಿಕಾರವನ್ನು ಅಧ್ಯಕ್ಷರು ಹಸ್ತಾಂತರಿಸಲಾಯಿತು.
ರಾಜ್ಯ ಮಹಿಳಾ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಡಿ. ರಾವ್ ಮತ್ತು ರಾಜ್ಯ ಕಾರ್ಯದರ್ಶಿಯಾಗಿ ಝೀನತ್ ಅವರನ್ನು ನೇಮಕ ಮಾಡಲಾಯಿತು.
ಈ ಸಂಧರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ, ಮಾಜಿ ಮೇಯರ ಶಶಿಧರ ಹೆಗ್ಡೆ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ದ.ಕ. ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೊ, ಪ್ರಮುಖರಾದ ಮಂಜುಳ ನಾಯಕ್, ಶಕುಂತಲಾ ಕಾಮತ್, ನಮಿತಾ ಡಿ. ರಾವ್ ಮತ್ತಿತರರು ಉಪಸ್ಥಿತರಿದ್ದರು.


