ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ ಆರಂಭ
ಅವರು ಸೋಮವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಾದಕ ವ್ಯಸನ ಮುಕ್ತ ಸಮಾಜದ ಕುರಿತ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು.
ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯಾದ್ಯಂತ ಎರಡು ತಿಂಗಳ ಸಮಗ್ರ "ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ"ವನ್ನು ಆರಂಭಿಸಲಾಗಿದೆ ಎಂದರು.
"ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ"ವನ್ನು ರಾಜ್ಯಾದ್ಯಂತ ಮಹಿಳಾ ಸ್ವ-ಸಹಾಯ ಗುಂಪುಗಳು ಮತ್ತು ಇತರೆ ಸಮುದಾಯದೊಂದಿಗೆ ನಡೆಸಲಾಗುತ್ತಿರುವುದು ಮತ್ತೊಂದು ವಿಶೇಷವಾಗಿದೆ. ಮಾದಕ ದ್ರವ್ಯ ಬಳಕೆ ಮತ್ತು ವ್ಯಸನದಿಂದ ಉಂಟಾಗುವ ಹಿಂಸೆ, ದೌರ್ಜನ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಸಮಗ್ರ ಜಾಗೃತಿ ಮೂಡಿಸಲಾಗುತ್ತದೆ. ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ಮತ್ತು ಅವುಗಳ ದುಷ್ಪರಿಣಾಮಗಳ ಬಗ್ಗೆ ಸಮುದಾಯಗಳಿಗೆ ತಿಳಿಸಲು, ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗುತ್ತದೆ ಎಂದರು.
ವಿಶೇಷ ಕಾರ್ಯಕ್ರಮ..
ಅಭಿಯಾನವನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಲು, ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿ ಸ್ವಸಹಾಯ ಗುಂಪುಗಳ ಮೂಲಕ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. ಬೀದಿ ನಾಟಕಗಳು, ಜಾಗೃತಿ ರ್ಯಾಲಿಗಳು, ಉಪನ್ಯಾಸಗಳು, ಕಾರ್ಯಾಗಾರಗಳು, ಕರಪತ್ರಗಳು ಮತ್ತು ಪೋಸ್ಟರ್ಗಳು, ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಅಭಿಯಾನಗಳು, ಆರೋಗ್ಯ ಸಲಹಾ ಶಿಬಿರಗಳು, ಕಿರುಚಿತ್ರಗಳ ಪ್ರದರ್ಶನಗಳು ಪ್ರಮಾಣ ವಚನ ಸಮಾರಂಭಗಳು ಈ ಎರಡು ತಿಂಗಳ ಅಭಿಯಾನದಲ್ಲಿ ಸೇರಿವೆ.
ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಯರಾಮ್, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ಉಪಸ್ಥಿತರಿದ್ದರು.