ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಉಚಿತ ವೈದ್ಯಕೀಯ ತಪಾಸಣಾ ಶಿಬಿರ


ಮಂಗಳೂರು: ಕಿರಣ್ ಗೇಮ್ಸ್ ಟೀಮ್ ಮಾರ್ನಮಿಕಟ್ಟೆ ಇದರ 55ನೇ ವಾರ್ಷಿಕೋತ್ಸವದ ಅಂಗವಾಗಿ ರಾಮಕೃಷ್ಣ ಮಿಷನ್ ಮಂಗಳೂರು, ವಿಶ್ವಕರ್ಮ ಸಹಕಾರ ಬ್ಯಾಂಕ್ ಮತ್ತು ಮಹಾರಾಣಾ ಪ್ರತಾಪ್ ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ಕೆಎಂಸಿ ಆಸ್ಪತ್ರೆ ಮತ್ತು ಕೆಎಸ್ ಹೆಗ್ಡೆ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಭಾನುವಾರ ಮಂಗಳಾದೇವಿಯ ರಾಮಕೃಷ್ಣ ಆಶ್ರಮದಲ್ಲಿ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಆಳ್ವಾಸ್ ಎಜುಕೇಶನ್ ಟ್ರಸ್ಟ್‌ನ ಚೇರ್ಮನ್ ಡಾ. ಎಂ. ಮೋಹನ ಆಳ್ವ ಉದ್ಘಾಟಿಸಿದರು.

ವೈದ್ಯಕೀಯ ಕ್ಷೇತ್ರದಲ್ಲಿ ಇಂದು ಮಹತ್ವದ ಬದಲಾವಣೆಯಾಗಿದ್ದರೂ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಆರೋಗ್ಯ ರಕ್ಷಣೆಗೆ ಸೂಕ್ತ ತಪಾಸಣೆ, ವೈದ್ಯರ ಸಲಹೆ ಪಡೆಯುವುದು ಅತೀ ಅಗತ್ಯ ಎಂದು ಅವರು ಹೇಳಿದರು.

ರಾಮಕೃಷ್ಣ ಆಶ್ರಮದ ಸ್ವಾಮಿ ಜಿತಕಾಮಾನಂದಜೀ ಆಶೀರ್ವಚನ ನೀಡಿದರು.

ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಚಕ್ರಪಾಣಿ ಎಂ. ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್., ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಕಣಚೂರು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಬಿ. ದೇವದಾಸ್ ರೈ,  ಚಿತ್ರನಟ ರೂಪೇಶ್ ಶೆಟ್ಟಿ, ವಿಶ್ವಕರ್ಮ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಸ್.ಆರ್. ಹರೀಶ್ ಆಚಾರ್ಯ, ವಕೀಲ ರಾಘವೇಂದ್ರ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕಿರಣ್ ಗೇಮ್ಸ್ ಟೀಮ್‌ನ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಶೆಟ್ಟಿ ಶಿಬಿರದಲ್ಲಿ ಭಾಗವಹಿಸಿದ ವೈದ್ಯರ ಪರಿಚಯ ನೀಡಿದರು. ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಗೌರವ ಸಲಹೆಗಾರ ಯತಿರಾಜ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಬಿ. ಗುರುಪ್ರಸಾದ್ ಶೆಟ್ಟಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಗಿರೀಶ್ ಶೆಟ್ಟಿ ವಂದಿಸಿದರು. ಡಾ.ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ತಜ್ಞ ವೈದ್ಯರಾದ ಡಾ. ವಿಜಯೇಂದ್ರ ಶೆಣೈ, ಡಾ. ಭೂಷಣ್ ಶೆಟ್ಟಿ, ಡಾ. ದೀಪಕ್ ಹೆಗ್ಡೆ, ಡಾ. ಕೀರ್ತನ್ ರಾವ್, ಡಾ. ವೀಣಾ ಆರ್. ಭಟ್, ಡಾ. ಪ್ರಜೀತ್ ಹೆಗ್ಡೆ ನೇತೃತ್ವದಲ್ಲಿ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article