ಕರಾವಳಿಯಲ್ಲಿ ಮೋಡ ಸಹಿತ ಬಿಸಿಲು ವಾತಾವರಣ
ಮಂಗಳೂರು: ಕರಾವಳಿಯಲ್ಲಿ ಗುರುವಾರ ದಿನಪೂರ್ತಿ ಮೋಡ ಸಹಿತ ಬಿಸಿಲು ಹೊಂದಿದ ಮಿಶ್ರ ವಾತಾವರಣ ಕಂಡುಬಂದಿದ್ದು, ಸಂಜೆ ವೇಳೆ ಅಲ್ಪ ಮಳೆಯಾಗಿದೆ.
ದ.ಕ. ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವದಿಂದಲೇ ಜಿಟಿಜಿಟಿ ಮಳೆ ಕಾಣಿಸಿತ್ತು. ಬೆಳಗ್ಗೆ ಸ್ವಲ್ಪ ಹೊತ್ತು ಮಳೆ ಹೊರತುಪಡಿಸಿದರೆ ಇಡೀ ದಿನ ಮಳೆ ರಹಿತ ಮಿಶ್ರ ವಾತಾಔರಣ ಕಂಡುಬಂದಿದೆ. ಗ್ರಾಮಾಂತರ ಪ್ರದೇಶದಲ್ಲಿ ಅಷ್ಟಾಗಿ ನಿರಂತರ ಮಳೆಯಾಗದಿದ್ದರೂ ಮಂಗಳೂರಿನಲ್ಲಿ ಸಂಜೆ ಮಳೆ ಸುರಿದಿದೆ. ಸಂಜೆ ಬಳಿಕ ಮಳೆ ಕಡಿಮೆಯಾಗಿತ್ತು. ದ.ಕ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗಿನ ಮಾಹಿತಿಯಂತೆ ಕಳೆದ 24 ಗಂಟೆಗಳಲ್ಲಿ 17.1ಮಿಮಿ ಮಳೆ ದಾಖಲಾಗಿತ್ತು.
ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆಗಸ್ಟ್ 26ರಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ. ಆಗಸ್ಟ್ 25ರಂದು ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಈಗಿನಂತೆ ಆಗಸ್ಟ್ 27ರಿಂದ 30ರ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇರುವ ಸಾಧ್ಯತೆಗಳಿವೆ .ನಂತರ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.