ಆ.31ರಂದು ಮೂಡುಬಿದಿರೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಆ.31ರಂದು ಮೂಡುಬಿದಿರೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಮೂಡುಬಿದಿರೆ: ದ.ಕ. ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ, ತಾಲೂಕು ಪಂಚಾಯತ್ ಮೂಡುಬಿದಿರೆ, ಪುರಸಭೆ ಹಾಗೂ ತಾಲೂಕು ಯುವಜನ ಒಕ್ಕೂಟ(ರಿ) ಮೂಡುಬಿದಿರೆ ಮತ್ತು ತಾಲೂಕು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ 2025-26 ನೇ ಸಾಲಿನ ತಾಲೂಕು ಮಟ್ಟದ "ದಸರಾ ಕ್ರೀಡಾ ಕೂಟವು" ಆಗಸ್ಟ್ 31 ರಂದು ಸ್ವರಾಜ್ಯ ಮೈದಾನದಲ್ಲಿ ನಡೆಯಲಿದೆ.

ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. 

ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ದ್ವೀತಿಯ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದವರು ಸಪ್ಟೆಂಬರ್ 7 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ. 

ಪ್ರಥಮ ಬಾರಿಗೆ ಈ ಕ್ರೀಡಾಕೂಟದ ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳು ಮೊಬೈಲ್ ಆಪ್ಸ್/ವೆಬ್

ಪೋರ್ಟಲ್ http://dasaracmcup 2025.etrpindia.com/KA-sports : QR CODE ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಕಚೇರಿ ದೂರವಾಣಿ ಸಂಖ್ಯೆ 0824-2451264, ಮೂಡುಬಿದಿರೆ ತಾಲೂಕು ಕ್ರೀಡಾಕೂಟ ನೋಡಲ್ ಅಧಿಕಾರಿ 9449269755 ಇವರನ್ನು ಸಂಪರ್ಕಿಸಬಹುದು. ಪುರುಷರ ವಿಭಾಗದ 10,000 ಮೀ. ಓಟ ಹಾಗೂ ಮಹಿಳೆಯರ ವಿಭಾಗದ 3000 ಮೀ. ಓಟಗಳ ಸ್ಪರ್ಧೆಯು ಅದೇ ದಿನ ಬೆಳಿಗ್ಗೆ 8.30 ಕ್ಕೆ ಆರಂಭವಾಗಲಿದ್ದು ಎಲ್ಲಾ ಕ್ರೀಡಾಪಟುಗಳು ಬೆಳಿಗ್ಗೆ 8.30 ರ ಒಳಗೆ ವರದಿ ಮಾಡಿಕೊಳ್ಳಬೇಕು ಹಾಗೂ ಮೇಲೆ ಕಾಣಿಸುವ QR CODE ಅಥವಾ ಮೊಬೈಲ್ ಆಪ್ಯ್ / ವೆಬ್ ಪೋರ್ಟಲ್‌ನಲ್ಲಿ ನೋಂದಾವಣಿ ಮಾಡುವುದು ಕಡ್ಡಾಯ ಎಂದು ಕೂಟದ ನೋಡಲ್‌ ಅಧಿಕಾರಿ ನವೀನಚಂದ್ರ ಅಂಬೂರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article