ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ 79ನೇ ಸ್ವಾತ್ರಂತ್ರ್ಯೋತ್ಸವ ಆಚರಣೆ
ತಾಲೂಕು ತಹಶೀಲ್ದಾರ್ ಶ್ರೀಧರ ಮುಂದಲಮನಿ ಅವರು ಧ್ವಜವನ್ನರಳಿಸಿ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ಸಿಗುವಲ್ಲಿ ಶ್ರಮಿಸಿದವರನ್ನು ಹಾಗೂ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿವರನ್ನು ನೆನಪಿಸಿದರು.
ಸನ್ಮಾನ, ಗೌರವ:
ಎಸ್.ಎಸ್.ಎಲ್.ಸಿ, ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಹಾಗೂ ಮಿಲಿಟರಿಯ ನಿವೃತ್ತ ಅಧಿಕಾರಿಗಳನ್ನು ಗೌರವಿಸಲಾಯಿತು.
ಪುರಸಭಾಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಪುರಸಭಾ ಸದಸ್ಯರುಗಳು,ಗ್ಯಾರಂಟಿ ಅನುಷ್ಠಾನ ಯೋಜನೆಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, , ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಾಪ್ಪ, ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಕುಸುಮಾಧರ, ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ. ಉಪಸ್ಥಿತರಿದ್ದರು.
ಉಪ ತಹಶೀಲ್ದಾರ್ ರಾಮ ಕಾಯ೯ಕ್ರಮ ನಿರೂಪಿಸಿ, ವಂದಿಸಿದರು.
ಪಥ ಸಂಚಲನ:
ಪೊಲೀಸ್ ಉಪ ನಿರೀಕ್ಷಕಿ ಪ್ರತಿಭಾ ಅವರ ನೇತೃತ್ವದಲ್ಲಿ ಮೂಡುಬಿದಿರೆ ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಸ್ಕೌಟ್ಸ್-ಗೈಡ್ಸ್, ರೋರ‍್ಸ್-ರೇಂರ‍್ಸ್ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು.
