ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ, ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ

ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ, ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ


ಮೂಡುಬಿದಿರೆ: ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಹಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ತಾಲೂಕು ಹಾಗೂ ಸಂತ ಥೋಮಸ್ ವಿದ್ಯಾ ಸಂಸ್ಥೆಗಳು ಅಲಂಗಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟ 2025-2026ರಂದು ಅಲಂಗಾರಿನ ಸಂತ ಥೋಮಸ್ ವಿದ್ಯಾಸಂಸ್ಥೆಯ ಮೈದಾನದಲ್ಲಿ ಗುರುವಾರ ಉದ್ಘಾಟನೆಗೊಂಡಿತು.


ರೇ.ಫಾ. ಮೇಲ್ವಿನ್ ನೋರೋನ್ಹ ಅವರ ಅಧ್ಯಕ್ಷತೆ ವಹಿಸಿ ಪಂದ್ಯಾಟಿಸಿದರು.  ಪುರಸಭಾ ಸದಸ್ಯ ಪಿ.ಕೆ. ಥೋಮಸ್, ಮೂಡುಬಿದಿರೆ ವಾಲಿಬಾಲ್ ಅಸೋಶಿಯೇಷನ್ ನ ಅಧ್ಯಕ್ಷ ಡಾ. ವಿನಯ್ ಆಳ್ವ, ಎಸ್.ಕೆ.ಎಫ್. ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ತೇಜಸ್ ಆಚಾರ್ಯ, ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ನವೀನ್ ಪುತ್ರನ್, ನಾಗೇಶ್ ಕುಮಾರ್, ಶಿವಾನಂದ ಕಾಯ್ಕಿಣಿ, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ರಾಜೇಶ್ ಕಡಲಕೆರೆ, ಎಡ್ವರ್ಡ್ ಸೆರಾವೋ, ರಾಜ ಡಿ'ಸೋಜಾ ,  ಜಾನೆಟ್ ಮಿರಾoದ, ಉಭಯ ಶಾಲಾ ಮುಖ್ಯ ಶಿಕ್ಷಕಿಯರಾದ  ಸಿಲ್ವಿಯ ಡೇಸಾ, ಅಲ್ಫೋನ್ಸಾ, ದೈಹಿಕ ಶಿಕ್ಷಣ ಶಿಕ್ಷಕ ಉದಯ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article