ಮೂಡುಬಿದಿರೆಯಲ್ಲಿ ವೈಶ್ಯಾವಾಟಿಕೆ: ಇಬ್ಬರು ಪೊಲೀಸರ ವಶಕ್ಕೆ
Wednesday, August 27, 2025
ಮೂಡುಬಿದಿರೆ: ಓವ೯ ಮಹಿಳೆಯನ್ನು ಇಟ್ಟುಕೊಂಡು ವೈಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳಕ್ಕೆ ಮಂಗಳವಾರ ರಾತ್ರಿ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸ್ವರಾಜ್ ಮೈದಾನ ಬಳಿಯ ನಿವಾಸಿ ರಾಜೇಶ್ ಬೋವಿ, ಬೆಳ್ತಂಗಡಿ ತಾಲೂಕಿನ ನಾರಾವಿ ನಿವಾಸಿ ಭರತ್ ಜೈನ್ ಬಂಧಿತರು.
ಮಾರ್ಪಾಡಿ ಗ್ರಾಮದ ಆಳ್ವಾಸ್ ಆಸ್ಪತ್ರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಮಹಡಿ ಕಟ್ಟಡದಲ್ಲಿರುವ ರೂಂ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮೂಡುಬಿದಿರೆ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ಅವರು ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದರು. ಭರತ್ ಜೈನ್ ಸಂತ್ರಸ್ತ ಮಹಿಳೆಯನ್ನು ಇಟ್ಟುಕೊಂಡು ಗ್ರಾಹಕರಿಗೆ ತೋರಿಸಿ ವೇಶ್ಯವಾಟಿಕೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.
ಸಂತ್ರಸ್ತ ಮಹಿಳೆಯನ್ನು ರಕ್ಷಿಸಲಾಗಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದ್ದು ಶ್ರೀ ಸಂದೇಶ್ ಪಿ.ಜಿ ಅವರು ಪ್ರಕರಣದ ತನಿಖೆಯನ್ನು ಮುಂದುವರಿಸಿರುತ್ತಾರೆ.