ಮಾರ್ಪಾಡಿಯ ನಡ್ಯೋಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ
Saturday, August 16, 2025
ಮೂಡುಬಿದಿರೆ: ಮಾರ್ಪಾಡಿಯ ನಡ್ಯೋಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಪೂರ್ಣಿಮಾ ಎಸ್. ಆಚಾರ್ಯ ಧ್ವಜಾರೋಹಣಗೈದರು. ಶಾಲಾ ಮುಖ್ಯ ಶಿಕ್ಷಕಿ ಉಷಲತಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಭರತ್ ಕುಮಾರ್, ಕಾರ್ಯದರ್ಶಿ ಯತೀಶ್ ಕೋಟ್ಯಾನ್, ಸಲಹಾ ಸಮಿತಿ ಕಾರ್ಯದರ್ಶಿ ಪ್ರಸನ್ನ ಹೆಗ್ಡೆ, ಮಾಜಿ ಅಧ್ಯಕ್ಷ ಗಂಗಾಧರ ಬಂಗೇರ, ಮಾಜಿ ಕಾರ್ಯದರ್ಶಿ ವಿಶ್ವನಾಥ ಕೋಟ್ಯಾನ್, ನಡ್ಯೋಡಿ ದೈವಸ್ಥಾನದ ಅಧ್ಯಕ್ಷ ಗೋಪಾಲ ಪೂಜಾರಿ, ಬಾರತೀಯ ಕಿಸಾನ್ ಸಂಘ ಮಾರ್ಪಾಡಿ ಘಟಕದ ಅಧ್ಯಕ್ಚ ರಾಧಾಕೃಷ್ಣ ಶೆಟ್ಟಿ, ಮಹಿಳಾ ಸಂಘದ ಗೌರವ ಅಧ್ಯಕ್ಷೆ ಸುಜಯ ಜೈನ್, ಅಧ್ಯಕ್ಷೆ ಗೀತಾ ಪಿ.ಶೆಟ್ಟಿ, ಅಂಗನವಾಡಿ ಶಿಕ್ಷಕಿ ಹೇಮಾವತಿ ಪೂಜಾರಿ, ನಿವೃತ್ತ ಶಿಕ್ಷಕ ವಾಸುದೇವ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.