
ಮೂಡುಕೊಣಾಜೆಯಲ್ಲಿ ಪೌಷ್ಠಿಕ ಆಹಾರ ಅರಿವು ಕಾಯ೯ಕ್ರಮ
Sunday, August 10, 2025
ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಇದರ ಮೂಡುಬಿದಿರೆ ತಾಲೂಕಿನ ಮೂಡುಕೊಣಾಜೆ ಗ್ರಾಮದ ಧನಲಕ್ಷ್ಮೀ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮ ನಡೆಯಿತು.
ಸಮುದಾಯ ಅಭಿವೃದ್ಧಿ ಅಧಿಕಾರಿ ಮುತ್ತುರಾಜ್ ಅವರು ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ ಉತ್ತಮ ಆರೋಗ್ಯ ಕಾಪಾಡ ಬೇಕಾದರೆ ಯಾವ ಆಹಾರ ಸೇವನೆ ಮಾಡಬೇಕು, ಎಷ್ಟು ಪ್ರಮಾಣ ದಲ್ಲಿ ಸೇವಿಸಬೇಕು, ಯಾವಾಗ ಸೇವಿಸಬೇಕು, ಹೇಗೆ ಸೇವಿಸವೇಕು ಹಾಗೂ ಯಾವ ಆಹಾರದಲ್ಲಿ ಯಾವ ಪೌಷ್ಟಿಕಾಂಶ ಇದೆ ಎಂಬ ಬಗ್ಗೆ ಸವಿವಾರವಾಗಿ ಮಾಹಿತಿ ನೀಡಿದರು.
ಒಕ್ಕೂಟದ ಅಧ್ಯಕ್ಷೆ ಲತಾ ಹೆಗ್ಡೆ ಅಧ್ಯಕ್ಷತೆಯನ್ನು ವಹಿಸಿದ್ದರು.
ವಲಯದ ಮೇಲ್ವಿಚಾರಕ ಚಂದ್ರಹಾಸ್ ರವರು ಭಾಗವಹಿಸಿ ಕಾರ್ಯಕ್ರಮ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು. ಈ ಕಾರ್ಯಕ್ರಮ ಇವತ್ತಿಗೆ ಮಾತ್ರ ಸೀಮಿತ ಆಗದೆ ಪ್ರತಿ ದಿನ ನಮ್ಮ ಜೀವನದಲ್ಲಿ ಅಳವಡಿಸಿದ್ದಾಲ್ಲಿ ನಮ್ಮ ಆರೋಗ್ಯ ಕಾಪಾಡಲು ಸಾಧ್ಯ ಎಂದರು.
ಹಿರಿಯರಾದ ಪ್ರಶಾಂತ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿದ್ದರು. ಸೇವಾಪ್ರತಿನಿಧಿ ಜಯಲಕ್ಷ್ಮಿ ಅವರು ಉಪಸ್ಥಿತರಿದ್ದರು.
ಬಿಂದಿಯ ಅವರು ಸ್ವಾಗತಿಸಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು. ಸುಜಾತಾ ವಂದಿಸಿದರು.