ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನಿಂದ ಉಚಿತ ದಂತ ಚಿಕಿತ್ಸಾ ಶಿಬಿರ

ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನಿಂದ ಉಚಿತ ದಂತ ಚಿಕಿತ್ಸಾ ಶಿಬಿರ


ಮೂಡುಬಿದಿರೆ: ನಮ್ಮ ಟ್ರಸ್ಟ್ ಮಹಿಳೆಯರು, ಮಕ್ಕಳು, ವಿಶೇಷ ಮಕ್ಕಳ ಆರೋಗ್ಯ, ಗ್ರಾಮೀಣ ಮಕ್ಕಳ ಶಿಕ್ಷಣ ಹಾಗೂ ಪರಿಸರ ಸಂರಕ್ಷಣೆಯ ಮೂಲ ಉದ್ದೇಶವನ್ನಿಟ್ಟುಕೊಂಡು ಸ್ಥಾಪನೆಯಾಗಿದೆ. ಸರ್ಕಾರಿ ಶಾಲೆಗಳಿಗೆ ಸವಲತ್ತು, ಅಲ್ಲಿ ಆರೋಗ್ಯ ಶಿಬಿರಗಳ ಆಯೋಜನೆಯನ್ನು ಮಾಡುತ್ತಾ ಬಂದಿದ್ದೇವೆ. ಮುಂದೆ ಸುಮಾರು 250 ಮಂದಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಗರ್ಭ ಕೋಶದ ಕ್ಯಾನ್ಸರ್, ಬ್ಲಡ್ ಕ್ಯಾನ್ಸರ್ ಸಹಿತ ವಿಧದ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಟ್ರಸ್ಟ್ ಮುಖಾಂತರ ಆಯೋಜಿಸಲಾಗಿದೆ ಎಂದು ಕೆ.ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟಿನ ಸ್ಥಾಪಕಿ ಡಾ. ಅಮರಶ್ರೀ ಶೆಟ್ಟಿ ಹೇಳಿದರು. 

ಅವರು ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಮಂಗಳೂರು ದೇರಳಕಟ್ಟೆಯ ಎ.ಬಿ. ಶೆಟ್ಟಿ ಸ್ಮಾರಕ ದಂತ ವಿಶ್ವವಿದ್ಯಾಲಯ-ಮಕ್ಕಳ ದಂತ ಚಿಕಿತ್ಸಾ ವಿಭಾಗದ ಸಹಯೋಗದೊಂದಿಗೆ ಗಾಂಧಿನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಂತ ತಪಾಸಣೆ, ಚಿಕಿತ್ಸಾ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಉದ್ಯಮಿ ಕೆ. ಶ್ರೀಪತಿ ಭಟ್ ಶಿಬಿರವನ್ನು ಉದ್ಘಾಟಿಸಿ, ಅಮರನಾಥ ಶೆಟ್ಟಿ ಮೂಡುಬಿದಿರೆ ಮರೆಯಲಾಗದ ಮುತ್ಸದ್ದಿ. ತಮ್ಮ ಅಧಿಕಾರ ಅವಧಿ ಮಾತ್ರವಲ್ಲ, ಆ ಬಳಿಕವೂ ನಿರಂತರವಾಗಿ ಸಮಾಜ ಸೇವೆಯನ್ನು ಮಾಡುತ್ತಾ ಬಂದವರು. ಅವರ ನೆನಪಿನಲ್ಲಿ ಅವರ ಸಮಾಜ ಸೇವೆಯ ಆಶಯವನ್ನಿಟ್ಟುಕೊಂಡು ಟ್ರಸ್ಟ್ ಸ್ಥಾಪನೆಯಾಗಿ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು. 

ಟ್ರಸ್ಟಿನ ಸದಸ್ಯರಾದ ಮಹೇಶ್ ಕುಮಾರ್, ಆಸೀಫ್, ಶಾಂತ ಪ್ರಸಾದ್, ಎಸ್.ಡಿ.ಎಂ.ಸಿ ಅಧ್ಯಕ್ಷೆ ಸುನಿತಾ ಶೆಟ್ಟಿ, ಎ.ಬಿ.ಶೆಟ್ಟಿ ದಂತ ವಿಜ್ಞಾನ ಕಾಲೆಜೀನ ದಂತ ವೈದ್ಯಾಧಿಕಾರಿ ಡಾ.ಐಶಾನಿ, ಮುಖ್ಯ ಶಿಕ್ಷಕಿ ಕಸ್ತೂರಿ, ಸಹ ಶಿಕ್ಷಕಿಯರಾದ ಭವ್ಯಾ, ಸುಪ್ರಿತಾ, ಅಕ್ಷತಾ, ಎಸ್‌ಡಿಎಂಸಿ ಸದಸ್ಯರಾದ ಪೂಜಾ, ಅಕ್ಷತಾ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article