ಪುತ್ತಿಗೆ ಗ್ರಾ. ಪಂನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
Friday, August 15, 2025
ಮೂಡುಬಿದಿರೆ: ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ನಲ್ಲಿ ಪಂಚಾಯತ್ ಉಪಾಧ್ಯಕ್ಷ ದಯಾನಂದ ಅವರು ದ್ವಜಾರೋಹಣ ಮಾಡುವ ಮೂಲಕ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ನಂತರ ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೀಮ ನಾಯಕ ಬಿ., ಪಂಚಾಯತ್ ಸದಸ್ಯರು,ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.