ಮೆಸ್ಕಾಂನಲ್ಲಿ ಸದ್ಭಾವನಾ ದಿನಾಚರಣೆ
Wednesday, August 20, 2025
ಮಂಗಳೂರು: ಸದ್ಭಾವನಾ ದಿನಾಚರಣೆ ಅಂಗವಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮೆಸ್ಕಾಂ ಕಾರ್ಪೊರೇಟ್ ಕಛೇರಿಯಲ್ಲಿ ಆ.20 ರಂದು ನಡೆಯಿತು.
ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಜಯಕುಮಾರ್ ಆರ್., ಮುಖ್ಯ ಆರ್ಥಿಕ ಅಧಿಕಾರಿ ಮುರಳೀಧರ ನಾಯಕ್, ಆರ್ಥಿಕ ಸಲಹೆಗಾರ್ತಿ ವಲ್ಸಪಿ ಟಿ., ಪ್ರಧಾನ ವ್ಯವಸ್ಥಾಪಕ ಡಾ. ಬಿ.ಎಸ್. ಮಂಜುನಾಥಸ್ವಾಮಿ ಹಾಗೂ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮೆಸ್ಕಾಂ ಸಾರ್ವಜನಿಕ ಸಂಪರ್ಕ ಅಧಿಕಾರಿ ವಸಂತ ಶೆಟ್ಟಿ ಪ್ರಮಾಣ ವಚನ ವಿಧಿ ನಿರ್ವಹಿಸಿದರು.