ಮೌಲ್ಯಯುತ ಶಿಕ್ಷಣ ಪಡೆದ ವಿದ್ಯಾಥಿ೯ ಸಮೂಹದಿಂದ ನವ ಭಾರತ ನಿಮಾ೯ಣ ಸಾಧ್ಯ: ಲೆ. ಜನರಲ್ ಅರುಣ್ ಅನಂತನಾರಾಯಣ್
ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ವತಿಯಿಂದ ವಿದ್ಯಾಗಿರಿಯ ಕೆ.ವಿ. ಸುಬ್ಬಣ್ಣ ಬಯಲು ವೇದಿಕೆಯಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣಗೈದು ಮಾತನಾಡಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಮೂಲ್ಕಿ-ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್, ಸಂಸ್ಥೆಯ ಟ್ರಸ್ಟಿಗಳಾದ ವಿವೇಕ್ ಆಳ್ವ, ಡಾ ವಿನಯ ಆಳ್ವ ಡಾ. ಗ್ರೀಷ್ಮಾ, ಡಾ.ಹನಾ, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು. ಉಪನ್ಯಾಸಕ ರಾಜೇಶ್ ಡಿಸೋಜ ಹಾಗೂ ವೇಣುಗೋಪಾಲ ಶೆಟ್ಟಿ ನಿರೂಪಿಸಿದರು.
ಜಿಟಿ ಜಿಟಿ ಮಳೆಯ ನಡುವೆಯೂ ವ್ಯವಸ್ಥಿತ ಆಚರಣೆ:
ಎನ್‌ಸಿಸಿ ಕೆಡೆಟ್ ಸೀನಿಯರ್ ಅಂಡರ್ ಆಫೀಸರ್ ಅರ್ಚನಾ ನಾಗರಾಜ್ ಅವರಿಂದ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಎನ್‌ಸಿಸಿ ಜೂನಿಯರ್ ಅಂಡರ್ ಆಫೀಸರ್‌ಗಳಾದ ಸಂಜುಶ್ರೀ, ಗೀತಾ, ನಯನಾ ಹಾಗೂ ರಾಣಿ ಅತಿಥಿಗಳನ್ನು ವೇದಿಕೆಗೆ ಕರೆತಂದರು. ಪೆರೇಡ್ ಕಮಾಂಡರ್ ಭರತ್ ಗೌಡ ಅವರಿಂದ ವರದಿ ಪಡೆದು ಧ್ವಜರೋಹಣ ಮಾಡಲಾಯಿತು.
ಮಳೆಯ ನಡುವೆಯೂ ವಿಚಲಿತರಾಗದೆ ವಂದೇ ಮಾತರಂ, ರಾಷ್ಟ್ರ ಗೀತೆ ಹಾಗೂ ದೇಶ ಭಕ್ತಿಗೀತೆ ಕೋಟಿ ಕಂಠೋನ್ಸೆ ಹಾಡುಗಳನ್ನು ಹಾಡುವ ಮೂಲಕ ವಿದ್ಯಾರ್ಥಿಗಳು ಸಂಭ್ರಮಿಸಿದರು.
ತದ ನಂತರ ಅಜಯ್ ವಾರಿಯರ್ ತಂಡದಿಂದ ಸಂಗೀತ ರಸಮಂಜರಿ ಕಾಯ೯ಕ್ರಮ ಪ್ರಸ್ತುತಗೊಂಡಿತು.
