ಈಶ ಗ್ರಾಮೋತ್ಸವ: ಕ್ಲಸ್ಟರ್ ಮಟ್ಟದ ವಾಲಿಬಾಲ್, ಥ್ರೋಬಾಲ್ ಪಂದ್ಯಾಟ
ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯು ಜಾತಿ, ವೈಷ್ಯಮ್ಯ, ಧ್ವೇಷವನ್ನು ದೂರ ಮಾಡುವ ಕಲೆ ಎನ್ನುವುದು ಸದ್ಗುರುಗಳ ಆಶಯ. ಗ್ರಾಮೀಣ ಭಾರತದ ಏಳಿಗೆಗಾಗಿ ಗ್ರಾಮೀಣ ಮಟ್ಟಗಳಲ್ಲೇ ಕ್ರೀಡಾಕೂಟಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಕ್ರೀಡೆಯ ಮೂಲಕ ಸದ್ಗುರು ದೇಶಿಯ ಸಂಸ್ಕೃತಿಯನ್ನು ವಿಶ್ವದೆಲ್ಲೆಡೆ ಪಸರಿಸುತ್ತಿದ್ದಾರೆ ಎಂದು ಹೇಳಿದರು.
ಆಳ್ವಾಸ್ ಬಿಪಿಎಡ್ ಕಾಲೇಜಿನ ಪ್ರಾಂಶುಪಾಲ ಮಧು ಜಿ.ಆರ್. ಮುಖ್ಯ ಅತಿಥಿಯಾಗಿ ಮಾತನಾಡಿ, ಈಶ ಫೌಂಡೇಶನ್ನ ಗ್ರಾಮೋತ್ಸವ ಕ್ರೀಡಾಕೂಟದಲ್ಲಿ ಈವರೆಗೆ ಎರಡು ಲಕ್ಷಕ್ಕೂ ಅಧಿಕ ಮಂದಿ ಕ್ರೀಡಾಪಟುಗಳು, 35 ಸಾವಿರಕ್ಕೂ ಅಧಿಕ ಗ್ರಾಮಗಳು ಭಾಗವಹಿಸಿವೆ. 38 ಸಾವಿರಕ್ಕೂ ಅಧಿಕ ಮಂದಿ ಕ್ರೀಡಾಪಟುಗಳು ಭಾಗವಹಿಸಿರುವುದು ವಿಶೇಷ. ನಗರ ಕೇಂದ್ರಿತವಾಗಿ ಇಂದು ಹಲವಾರು ಕ್ರೀಡೆ, ಕ್ರೀಡಾಕೂಟಗಳ ನಡೆಯುತ್ತಿದೆ. ಆದರೆ ಸದ್ಗುರುಗಳ ಆಶಯದಂತೆ ಗ್ರಾಮೀಣ ಪ್ರದೇಶಗಳನ್ನು ಕೇಂದ್ರೀಕರಿಸಿ ಬೃಹತ್ ಕ್ರೀಡಾಕೂಟ ಆಯೋಜನೆ ಮಾಡುತ್ತಿರುವುದು ಸ್ವಾಗತಾರ್ಹ ಎಂದರು.
ಆಳ್ವಾಸ್ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಹಂಸವತಿ ಸಿ.ಎಚ್., ಯೋಜನೆಗಳ ಅನುಷ್ಠಾನ ಸಮಿತಿ ಮೂಡುಬಿದಿರೆ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಪಡುಮಾರ್ನಾಡು ಗ್ರಾ.ಪಂ. ಸದಸ್ಯ ರಮೇಶ್ ಶೆಟ್ಟಿ, ಕಾಂಗ್ರೆಸ್ ಮುಖಂಡ ಚಂದ್ರಹಾಸ ಸನಿಲ್ ಮುಖ್ಯ ಅತಿಥಿಯಾಗಿದ್ದರು. ಸಂಘಟನೆಯ ಪ್ರಮುಖರಾದ ಪ್ರಿತೇಶ್, ಅರವಿಂದ್, ದೀಪಕ್, ಮಾನಸಿ ಹಾಗೂ ಸ್ವಯಂ ಸೇವಕರು ಉಪಸ್ಥಿತರಿದ್ದರು.