ಕಾಳಿಕಾಂಬಾ ದೇವಳದಲ್ಲಿ ವರಮಹಾಲಕ್ಷ್ಮೀ ಪೂಜೆ
Friday, August 8, 2025
ಮೂಡುಬಿದಿರೆ: ಇಲ್ಲಿನ ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿಯ ವತಿಯಿಂದ ವರಮಹಾಲಕ್ಷ್ಮೀ ವೃತ ಪೂಜೆಯು ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ಪುರೋಹಿತ್ ಕೇಶವ ಆಚಾರ್ಯರ ನೇತೃತ್ವದಲ್ಲಿ ಶುಕ್ರವಾರ ನಡೆಯಿತು.
ಬೆಳಗ್ಗೆ ಕಲಶ ಪ್ರತಿಷ್ಠೆ, ಮಹಿಳೆಯರಿಂದ ಲಲಿತಾಸಹಸ್ರನಾಮ ಪಾರಾಯಣ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಕ್ಷೇತ್ರದ ಆಡಳಿತ ಮೊಕ್ತೇಸರ ಬಾಲಕೃಷ್ಣ ಆಚಾರ್ಯ, ಶಿವರಾಮ ಆಚಾರ್ಯ, ಯೋಗೀಶ್ ಆಚಾರ್ಯ, ಮಹಿಳಾ ಸಮಿತಿಯ ಅಧ್ಯಕ್ಷೆ ಶಾಂತಲಾ ಎಸ್. ಆಚಾರ್ಯ, ಕಾಳಿಕಾಂಬಾ ಸೇವಾ ಸಮಿತಿಯ ಅಧ್ಯಕ್ಷ ಶ್ರೀನಾಥ್ ಆಚಾರ್ಯ ಉಪಸ್ಥಿತರಿದ್ದರು. ಸುಮಾರು 2 ಸಾವಿರಕ್ಕೂ ಅದಿಕ ಮಂದಿ ಪಾಲ್ಗೊಂಡರು.

