ಮಕ್ಕಳಲ್ಲಿ ಭಾಷೆ ಮತ್ತು ಸಂಸ್ಕೃತಿಯ ಅರಿವು ಮೂಡಿಸುವ ಕೆಲಸವಾಗಲಿ: ಡಾ. ಮೋಹನ ಆಳ್ವ
ಮೂಡುಬಿದಿರೆ ಬಂಟರ ಮಹಿಳಾ ಘಟಕದಿಂದ ಆಟಿಡೊಂಜಿ ದಿನ
ಅವರು ಬಂಟರ ಸಂಘ ಮೂಡುಬಿದಿರೆ, ಬಂಟರ ಮಹಿಳಾ ಘಟಕದ ಆಶ್ರಯದಲ್ಲಿ ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ಭಾನುವಾರ ನಡೆದ ೩ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಂಬಳದ ಪ್ರಧಾನ ತೀರ್ಪುಗಾರ, ಸಿನಿಮಾ ನಟ ರಾಜೀವ್ ಶೆಟ್ಟಿ ಎಡ್ತೂರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಕಷ್ಟದ ದಿನಗಳಲ್ಲೂ ನಮ್ಮ ಸಂಸ್ಕೃತಿ, ಪರಂಪರೆ ಶ್ರೀಮಂತವಾಗಿತ್ತು. ಇಂದು ಹಲವು ವಿಚಾರಗಳು ಅಳಿದು ಹೋಗಿದ್ದರೂ, ಹಿರಿಯರಿಗೆ ಗೊತ್ತಿರುವ ನಮ್ಮ ಪರಂಪರೆಯ ವಿಚಾರಗಳನ್ನು ಸರಿಯಾದ ರೀತಿಯಲ್ಲಿ ಇಂದಿನ ಪೀಳಿಗೆಯಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕೆಂದರು.
ಬಂಟರ ಸಂಘದ ಕಾರ್ಯದರ್ಶಿ ಮೇಘನಾಥ ಶೆಟ್ಟಿ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿದರು. ಮಹಾವೀರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ವಿಜಯಲಕ್ಷ್ಮೀ ಉಪಸ್ಥಿತರಿದ್ದರು.
ಸಾಧಕರಿಗೆ ಸನ್ಮಾನ:
ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ನರ್ಸ್ ಲಕ್ಷ್ಮೀ ಶೆಟ್ಟಿ, ಯೋಗ ಸಾಧಕಿ ಪ್ರಫುಲ್ಲಾ ಶೆಟ್ಟಿ, ಕೃಷಿ ಹೈನುಗಾರಿಕೆ ಸಾಧಕಿ ಬಂಗೇರಬೆಟ್ಟು ಯಶೋಧ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಅನಾರೋಗ್ಯ ಪೀಡಿತರಿಗೆ ಧನ ಸಹಾಯವನ್ನು ವಿತರಿಸಲಾಯಿತು.
ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್.ಹೆಗ್ಡೆ ಅಧ್ಯಕ್ಷತೆ ವಹಿಸಿದರು. ಬಂಟರ ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಹರೀಶ್ ಶೆಟ್ಟಿ ಐಕಳ, ವಾಮದಪದವು ಬಂಟರ ಸಂಘದ ವಸಂತ ಶೆಟ್ಟಿ ಕೇದಿಗೆ, ಗುರುಪುರ ವಲಯ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಬಂಟ್ವಾಳ ಬಂಟರ ಸಂಘದ ಕೋಶಾಧಿಕಾರಿ ವಸಂತ್ ಶೆಟ್ಟಿ ಶ್ರದ್ಧಾ, ಲೋಕೇಶ್ ಶೆಟ್ಟಿ ಉಪಸ್ಥಿತರಿದ್ದರು.
ಮಹಿಳಾ ಘಟಕದ ಕೋಶಾಧಿಕಾರಿ ಗೀತಾ ಪುರುಷೋತ್ತಮ ಶೆಟ್ಟಿ ಸ್ವಾಗತಿಸಿ, ಮಂಜೂಷಾ ಶೆಟ್ಟಿ ವಿದ್ಯಾರ್ಥಿಗಳ ವಿವರ ನೀಡಿದರು. ಶಿವ ಪ್ರಸಾದ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಅನಿತಾ ಶೆಟ್ಟಿ ಅತಿಥಿ ಪರಿಚಯಿಸಿದರು. ಕಾರ್ಯದರ್ಶಿ ಸೌಮ್ಯ ಎಸ್.ಶೆಟ್ಟಿ ವಂದಿಸಿದರು.