ಗಾಂಧಿನಗರ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ
Friday, August 15, 2025
ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಗಾಂಧಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ. ಅಮರಶ್ರೀ ಧ್ವಜಾರೋಹಣಗೈದರು.
ಇನ್ನರ್‌ವೀಲ್ ಮಾಜಿ ಅಧ್ಯಕ್ಷ ಜಯಶ್ರೀ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷೆ ಸುನೀತಾ ಶೆಟ್ಟಿ, ಮುಖ್ಯ ಶಿಕ್ಷಕಿ ಕಸ್ತೂರಿ ಎಚ್., ಗ್ಯಾರೇಜ್ ಮಾಲಕರ ಸಂಘದ ವಲಯ ಅಧ್ಯಕ್ಷ ಗುರುಪ್ರಸಾದ್, ಯೋಗ ಶಿಕ್ಷಕ ಪ್ರಕಾಶ್, ಅಂಗನವಾಡಿ ಕಾರ್ಯಕರ್ತೆ ಜಯಂತಿ, ಎಸ್‌ಡಿಎಂಸಿ ಸದಸ್ಯರು ಪೋಷಕರು, ವಿದ್ಯಾರ್ಥಿಗಳಿದ್ದರು.