ಎಕ್ಸಲೆಂಟ್ ವಿವಿಧ ಘಟಕಗಳ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ
ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಮುಖ್ಯ ಅತಿಥಿಯಾಗಿದ್ದರು.
ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಮಾತನಾಡಿ, ಸಮಾಜ ಸೇವೆಯ ಮೂಲಕ ದೇಶದ ಅಭಿವೃದ್ಧಿಯ ಕನಸನ್ನು ಕಾಣಬೇಕಾದರೆ ಶಾಲೆ ಕಾಲೇಜುಗಳಲ್ಲಿ ವಿವಿಧ ಘಟಕಗಳ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಪಾಲ್ಗೊಳ್ಳಬೇಕು. ನೋಡಿ ಕಲಿ ಮಾಡಿ ತಿಳಿ ತತ್ವವನ್ನು ಅಳವಡಿಸಿಕೊಳ್ಳಬೇಕು. ಇಂದಿನ ಸವಾಲಿನ ಪಾಠಗಳು ಮುಂದಿನ ಸಂತೋಷದ ಬದುಕಿಗೆ ಪ್ರೇರಣೆಯಾಗುತ್ತದೆ ಎಂದರು.
ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಮಹೇಂದ್ರ ಜೈನ್, ಎನ್ ಎಸ್‌ಎಸ್ ಕಾರ್ಯಕ್ರಮಾಧಿಕಾರಿ ತೇಜಸ್ವಿ ಭಟ್, ರೋವರ್ಸ್ ಅಧಿಕಾರಿ ಪ್ರದೀಪ್ ಕೆಪಿ ಮತ್ತು ವಿವಿಧ ಘಟಕಗಳ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.
ರೆಡ್‌ಕ್ರಾಸ್ ಅಧಿಕಾರಿ ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ರೋವರ್ಸ್ ವಿದ್ಯಾರ್ಥಿ ರೇವಣ್ಣ ಸಿದ್ದು ಮತ್ತು ಮನ್ನಾ ಭೋಜಕ್ಕ ಅತಿಥಿಗಳನ್ನು ಪರಿಚಯಿಸಿದರು. ಎನ್‌ಸಿಸಿ ಕೆಡೆಟ್ ದಿಶಾಂತ್ ಗೌಡ ಪ್ರತಿಜ್ಞಾ ವಿಧಿ ಬೋಧಿಸಿದರು. ಎನ್‌ಎಸ್‌ಎಸ್ ಸ್ವಯಂಸೇವಕಿ ರಶ್ಮಿತಾ ಶೆಟ್ಟಿ ನಿರೂಪಿಸಿದರು. ರೇಂಜರ್ಸ್ ಅಧಿಕಾರಿ ಸಂಧ್ಯಾ ನಾಯಕ್ ವಂದಿಸಿದರು.
