
ವಾಲ್ಪಾಡಿ ಗ್ರಾಮಸಭೆ: ಅಳಿಯೂರು ಪ್ರೌಢಶಾಲೆಗೆ ಖಾಯಂ ಶಿಕ್ಷಕರನ್ನು ನೀಡುವಂತೆ ಗ್ರಾಮಸ್ಥರ ಒತ್ತಾಯ
ಅವರು ವಾಲ್ಪಾಡಿ ಗ್ರಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಪ್ರಥಮ ಸುತ್ತಿನ ಗ್ರಾಮಸಭೆಯಲ್ಲಿ ಮಾತನಾಡಿದರು.
ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಗೈರಾಗಿರುವುದಕ್ಕೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.
ಬೆಳೆ ಸಮೀಕ್ಷೆ ಅವೈಜ್ಞಾನಿಕ ರೀತಿಯಲ್ಲಿ ನಡೆಯುತ್ತಿದ್ದೆ. ಸಮೀಕ್ಷೆ ಸಂದರ್ಭ ಗ್ರಾಪಂ ಅನ್ನು ಸಂಪರ್ಕಿಸದೇ ಇರುವುದರಿಂದ ಕೃಷಿ ಇಲಾಖೆ ಅಪೂರ್ಣ ಮಾಹಿತಿಯ ಆಧಾರದಲ್ಲಿ ಸಮೀಕ್ಷೆ ನಡೆಸುತ್ತಿದೆ. ಇದರಿಂದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ ಎಂದು ತಾಪಂ ಮಾಜಿ ಸದಸ್ಯ ರುಕ್ಕಯ್ಯ ಪೂಜಾರಿ ಹೇಳಿದರು.
ಶಿರ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಗರ್ ಸಹಿತ ವಿವಿಧ ಕಾಯಿಲೆಗಳಿಗೆ ಬೇಕಾದ ಔಷಧಿ ಇಲ್ಲ ಎಂದು ಸದಸ್ಯ ಅರುಣ್ ಕುಮಾರ್ ಶೆಟ್ಟಿ ಹೇಳಿದರು. ಈ ಕುರಿತು ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಅರೋಗ್ಯ ಸಹಾಯಕಿ ಅನಿತಾ ತಿಳಿಸಿದರು.
ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.
ಉಪಾಧ್ಯಕ್ಷ ಗಣೇಶ್ ಬಿ. ಅಳಿಯೂರು, ಪಂಚಾಯತ್ ಸದಸ್ಯರು, ಪಿಡಿಒ ಮಂಜುಳಾ ಚಚೆ೯ಯಲ್ಲಿ ಪಾಲ್ಗೊಂಡಿದ್ದರು.
ಗ್ರಾಮಸಭೆಗೆ ಗ್ರಾಮಸ್ಥರ ಕೊರತೆ:
ಪ್ರಮುಖ ಕೆಲವು ಇಲಾಖೆಯ ಅಧಿಕಾರಿಗಳು ಬಂದಿದ್ದರೂ, ಕೇವಲ ಬೆರಳೆಣಿಕೆಯ ಗ್ರಾಮಸ್ಥರಿರುವುದು ಕಂಡುಬಂತು. ಈ ಹಿಂದೆ ಗ್ರಾಮಸಭೆಯೊಂದು ಅಧಿಕಾರಿಗಳು, ಗ್ರಾಮಸ್ಥರು ಇಲ್ಲದೆ ರದ್ದಾಗಿತ್ತು.