ಮೂಡುಬಿದಿರೆ ಶ್ರೀ ಗಣೇಶೋತ್ಸವ: ಗುರು ಹಿರಿಯರನ್ನು ಗೌರವಿಸುವುದರಿಂದ ಗಣಪತಿ ಕೃಪೆ

ಮೂಡುಬಿದಿರೆ ಶ್ರೀ ಗಣೇಶೋತ್ಸವ: ಗುರು ಹಿರಿಯರನ್ನು ಗೌರವಿಸುವುದರಿಂದ ಗಣಪತಿ ಕೃಪೆ


ಮೂಡುಬಿದಿರೆ: ಆದಿ ಪೂಜಿತ ಗಣಪ ನಮಗೆ ಆತ್ಮಸ್ಥೆಯ ಹೆಚ್ಚಿಸುವ ಭಗವಂತ. ಗುರುಹಿರಿಯರನ್ನು ಗೌರವಿಸುವುದರಿಂದ ಗಣಪತಿ ಕೃಪೆ ಸಿಗುತ್ತದೆ ಎಂದು ಶ್ರೀ ಮಹಾವೀರ ಕಾಲೇಜಿನ ಪ್ರಾಂಶುಪಾಲ ಡಾ.ರಾಧಾಕೃಷ್ಣ ಶೆಟ್ಟಿ ಹೇಳಿದರು. 

ಅವರು ಸಾರ್ವಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ಆಶ್ರಯದಲ್ಲಿ ಸಮಾಜಮಂದಿರದಲ್ಲಿ ಶನಿವಾರ ಸಾಯಂಕಾಲ ನಡೆದ 62ನೇ ವರ್ಷದ ಮೂಡುಬಿದಿರೆ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭೆ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು. 

ಟ್ರಸ್ಟ್ ಅಧ್ಯಕ್ಷ ನಾರಾಯಣ ಪಿ.ಎಂ ಅಧ್ಯಕ್ಷತೆ ವಹಿಸಿದರು. 

ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಮೂಡುಬಿದಿರೆ ಪುರಸಭೆ ಅಧ್ಯಕ್ಷೆ ಜಯಶ್ರೀ ಕೇಶವ, ಮೂಡುಬಿದಿರೆ ತಹಸೀಲ್ದಾರ್ ಶ್ರೀಧರ್ ಮುಂದಲಮನಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಮುಖ್ಯ ಅತಿಥಿಯಾಗಿದ್ದರು.

ಟ್ರಸ್ಟ್ ಉಪಾಧ್ಯಕ್ಷರಾದ ಕೊರಗ ಶೆಟ್ಟಿ, ರಾಜಾರಾಮ್ ನಾಗರಕಟ್ಟೆ, ಪ್ರಧಾನ ಕಾರ್ಯದರ್ಶಿ ಸುದರ್ಶನ್ ಎಂ., ಕಾರ್ಯದರ್ಶಿ ಗಂಗಾಧರ ಎಂ, ಕೋಶಾಧಿಕಾರಿ ಚೇತನ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಲಕ್ಷಣ್ ಪೂಜಾರಿ ಹಾಗೂ ಪ್ರಸನ್ನ ಶೆಣೈ ವಿಜೇತರ ವಿವರ ನೀಡಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article