
ಮೂಡುಬಿದಿರೆಯಲ್ಲಿ ಜೈ ಭೀಮ್ ಯುವಸೇನೆಯಿಂದ ಆರೋಗ್ಯ ಶಿಬಿರ
Sunday, August 3, 2025
ಮೂಡುಬಿದಿರೆ: ಸುವರ್ಣ ಕರ್ನಾಟಕ ರಾಜ್ಯ ಸಮಿತಿ ಜೈ ಭೀಮ್ ಯುವ ಸೇನೆ ಆಶ್ರಯದಲ್ಲಿ, ಯೆನೆಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಝುಲೇಖ ಯೆನೆಪೋಯ ಗ್ರಂಥಿ ಸಂಸ್ಥೆ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಸಮಾಜಮಂದಿರದಲ್ಲಿ ಭಾನುವಾರ ನಡೆಯಿತು.
ಮೂಡುಬಿದಿರೆ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಕೃಷ್ಣಪ್ಪ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಇಂದಿನ ಆಧುನಿಕ ಕಾಲಘಟ್ಟದಲ್ಲಿ ಆರೋಗ್ಯ ಸಮಸ್ಯೆ ಸಾಮಾನ್ಯವಾಗಿದೆ. ಕಾಲಕ್ಕೆ ಅನುಗುಣವಾಗಿ ಆರೋಗ್ಯ ತಪಾಸಣೆ, ಆರೋಗ್ಯ ಸಮಸ್ಯೆಗಳಿದ್ದಲ್ಲಿ ಚಿಕಿತ್ಸೆ ಪಡೆಯುವುದು ಬಹು ಮುಖ್ಯ. ಆರೋಗ್ಯ ಶಿಬಿರಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಸಂಘಟನೆಯ ಸಂಸ್ಥಾಪಕ, ರಾಜ್ಯಾಧ್ಯಕ್ಷ ವರ್ತೂರ್ ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು.
ಯೆನೆಪೋಯ ಸಂಸ್ಥೆಯ ಡಾ.ಅಬ್ದುಲ್ ಅಝೀಜ್, ಸಂಘಟನೆಯ ಮೂಡುಬಿದಿರೆ ತಾಲೂಕು ಅಧ್ಯಕ್ಷ ಪ್ರವೀಣ್, ಉಡುಪಿ ಜಿಲ್ಲಾಧ್ಯಕ್ಷ ರಾಜೇಶ್, ಪ್ರಮುಖರಾದ ಶೇಖರ್ ನೆತ್ತೋಡಿ, ಸುನಿಲ್, ಶ್ವೇತಾ ಗಂಟಾಲ್ಕಟ್ಟೆ, ಮೂಡುಬಿದಿರೆ ತಾಲೂಕು ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.