ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ: ವೃದ್ಧ ಆರೆಸ್ಟ್

ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ: ವೃದ್ಧ ಆರೆಸ್ಟ್


ಮೂಡುಬಿದಿರೆ: ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವತಿ೯ಸಿದ್ದ ವೃದ್ಧನನ್ನು ಮೂಡುಬಿದಿರೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬೆಳುವಾಯಿಯ ನಿವಾಸಿ ವೃದ್ಧ ರೆಹ್ಮಾನ್ ಬಂಧಿತ.

ಮಂಗಳೂರು-ಮೂಡುಬಿದಿರೆ-ಕಾಕ೯ಳ ಮಧ್ಯೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ಘಟನೆ ನಡೆದಿದ್ದು ಇದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದ್ದು ಈ ಬಗ್ಗೆ ಯಾರೂ ದೂರು ಕೊಡದ ಹಿನ್ನೆಲೆಯಲ್ಲಿ ಪೊಲೀಸರು ವೃದ್ಧನನ್ನು ಕರೆಸಿ ವಿಚಾರಣೆ ಮಾಡಿ ಬಿಟ್ಟಿದ್ದರು.

ಆದರೆ ಇಂದು (ಶನಿವಾರ) ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆ ಮೂಡುಬಿದಿರೆ ತೀರ್ವವಾಗಿ ವಿರೋಧಿಸಿದಲ್ಲದೆ ಸ್ವತಃ ಸಂಘಟನೆ ವತಿಯಿಂದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಅವರಿಗೆ ದೂರನ್ನು ನೀಡಿದ್ದರು.

ಈ ಸಂದಭ೯ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದ ಇನ್ಸ್‌ಪೆಕ್ಟರ್ ಅವರು ತಕ್ಷಣ ಕಾಯ೯ಪ್ರವೃತರಾಗಿ ರೆಹ್ಮಾನ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article