ದರೆಗುಡ್ಡೆ ಗ್ರಾಮಸಭೆ: ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ದಂಡ ವಿಧಿಸಲು ಗ್ರಾಮಸ್ಥರ ಆಗ್ರಹ

ದರೆಗುಡ್ಡೆ ಗ್ರಾಮಸಭೆ: ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ದಂಡ ವಿಧಿಸಲು ಗ್ರಾಮಸ್ಥರ ಆಗ್ರಹ


ಮೂಡುಬಿದಿರೆ: ದರೆಗುಡ್ಡೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆಯು ಇಲ್ಲಿನ ಸಂಜೀವಿನಿ ಕಟ್ಟಡದ ಸಭಾಂಗಣದಲ್ಲಿ ನಡೆಯಿತು. 

ಗ್ರಾಮಸಭೆಯ ನೋಡಲ್ ಅಧಿಕಾರಿಯಾಗಿ ಭಾಗವಹಿಸಿದ್ದ  ತಾ. ಪಂ. ಕಾಯ೯ನಿವ೯ಹಣಾಧಿಕಾರಿ ಕುಸುಮಾಧರ್ ಮಾತನಾಡಿ ಉತ್ತಮ ಆರೋಗ್ಯದ ದೃಷ್ಟಿಯಿಂದ ಗ್ರಾಮದ ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು. ಕಸವನ್ನು ಸಿಕ್ಕಿದ್ದಲ್ಲಿ, ರಸ್ತೆ ಬದಿಗಳಲ್ಲಿ ಬಿಸಾಡದೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದ ಅವರು ಉದ್ಯೋಗ ಖಾತರಿ ಯೋಜನೆಯಲ್ಲಿ ಅತೀ ಹೆಚ್ಚು ಮಾನವ ದಿನಗಳನ್ನು ಅಳವಡಿಸಿಕೊಳ್ಳುವ ಮೂಲಕ ದರೆಗುಡ್ಡೆ ಗ್ರಾ.ಪಂಚಾಯತ್ ಮೂಡುಬಿದಿರೆ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿತ್ತು ಈ ಬಾರಿಯೂ ಅದೇ ಸ್ಥಾನವನ್ನು ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು.


ಗ್ರಾಮಸ್ಥ ವಿನ್ಸೆಂಟ್ ಅವರು ಮಾತನಾಡಿ, ಎಲ್ಲೆಂದರಲ್ಲಿ ಕಸ ಬೀಸಾಡುವವರನ್ನು ಸಿಸಿ ಕೆಮರಾ ಮೂಲಕ ಪತ್ತೆ ಹಚ್ಚಿ ದಂಡ ವಿಧಿಸಬೇಕೆಂದು ಆಗ್ರಹಿಸಿದರು.

ಪಂಚಾಯತ್ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು ಅಧ್ಯಕ್ಷತೆ ವಹಿಸಿ ಮಾತನಾಡಿ ಅಭಿವೃಧ್ಧಿ ಕೆಲಸಗಳಿಗೆ ಗ್ರಾಮಸ್ಥರು ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು. 

ವಿವಿಧ ಇಲಾಖಾಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

ಉಪಾಧ್ಯಕ್ಷೆ ನಳಿನಿ, ಸದಸ್ಯರು  ಚಚೆ೯ಯಲ್ಲಿ ಪಾಲ್ಗೊಂಡಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜು ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಚ್ಛತೆಯ ವಾಹನಕ್ಕೆ ಕಸವನ್ನು ನೀಡುವವರು ಹಸಿ ಕಸ, ಒಣ ಕಸವನ್ನು ವಿಂಗಡನೆ ಮಾಡಿ ನೀಡಬೇಕು. ಮನೆ ತೆರಿಗೆ, ನೀರಿನ ತೆರಿಗೆ ಉದ್ಯಮ ಲೈಸನ್ಸ್ ಫೀಸು ಮತ್ತು ಭೂಕಂದಾಯವನ್ನು ಕ್ಲಪ್ತ ಸಮಯದಲ್ಲಿ ಪಾವತಿಸುವಂತೆ ತಿಳಿಸಿದರು. 

ಬಿಲ್ ಕಲೆಕ್ಟರ್ ನಯನಾ ವಾಷಿ೯ಕ ವರದಿ ವಾಚಿಸಿದರು. ಕಾಯ೯ದಶಿ೯ ಸುನಂದಾ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article