ಕ್ಯಾನ್ಸರ್ ಕಾಯಿಲೆಯ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು: ಡಾ. ಶಾಂತಾರಾಮ ಶೆಟ್ಟಿ
ಅವರು ಭಾನುವಾರ ಕನ್ನಡ ಭವನದಲ್ಲಿ ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಹಾಗೂ ಕ್ಯಾನ್ಸರ್ ಸ್ಕ್ಯಾನಿಂಗ್ ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆಶಿರ್ವಚನ ನೀಡಿ, ಅಮರನಾಥ ಶೆಟ್ಟಿ ಓರ್ವ ಸಜ್ಜನ ರಾಜಕಾರಣಿಯಾಗಿದ್ದರು. ಅವರ ದೂರದೃಷ್ಠಿ ಚಿಂತನೆಗಳು, ಸಮಾಜಮುಖಿ ಕಾರ್ಯಕ್ರಮಗಳು ಇಂದಿಗೂ ಚಿರಸ್ಥಾಯಿಯಾಗಿವೆ. ಅವರ ಪುತ್ರಿ ಡಾ. ಅಮರಶ್ರೀ ತನ್ನ ತಂದೆಯ ಹೆಸರಿನಲ್ಲಿ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿ ಸಮಾಜ ಸೇವೆಯನ್ನು ಆರಂಭಿಸಿರುವುದು ಶ್ಲಾಘನೀಯ ಎಂದರು.
ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಕೆ. ಪ್ರತಾಪಚಂದ್ರ ಶೆಟ್ಟಿ, ಉದ್ಯಮಿ ಕೆ. ಶ್ರೀಪತಿ ಭಟ್, ಅದಾನಿ ಗ್ರೂಪ್‌ನ ಕಿಶೋರ್ ಆಳ್ವ, ಕುದ್ರೋಳಿ ಗೋಕರ್ಣಾಥೇಶ್ವರ ದೇವಸ್ಥಾನದ ಟ್ರಸ್ಟಿ ಪದ್ಮರಾಜ್ ಆರ್., ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್‌ನ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ, ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಗಳಾದ ಜಯಶ್ರೀ ಅಮರನಾಥ ಶೆಟ್ಟಿ, ಆಶ್ರಿತಾ ಪಿ. ಶೆಟ್ಟಿ, ಡಾ. ಕಮಲಾಕ್ಷ ಶೆಣೈ, ಡಾ. ಕವಿತ ಉಪಸ್ಥಿತರಿದ್ದರು.
ಡಾ. ಅಮರಶ್ರೀ ಶೆಟ್ಟಿ ಸ್ವಾಗತಿಸಿ, ಟ್ರಸ್ಟ್‌ನ ಧ್ಯೇಯೋದ್ದೇಶಗಳ ಬಗ್ಗೆ ವಿವರ ನೀಡಿದರು.