ಕೇಂದ್ರದ ಮಾಜಿ ಸಚಿವ ಎಂ. ವೀರಪ್ಪ ಮೊಯಿಲಿ ಮಹಾವೀರ ಕಾಲೇಜಿಗೆ ವಿಶೇಷ ಭೇಟಿ
Saturday, August 30, 2025
ಮೂಡುಬಿದಿರೆ: ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪ ಮೊಯಿಲಿ ಅವರು ಶನಿವಾರ ಶ್ರೀ ಮಹಾವೀರ ಕಾಲೇಜಿಗೆ ವಿಶೇಷ ಭೇಟಿ ನೀಡಿ ಉಪನ್ಯಾಸಕ ವೃಂದದೊಂದಿಗೆ ಸಂವಾದ ನಡೆಸಿದರು.
ಕಾಲೇಜಿಗೆ ಆಗಮಿಸಿ ಹೊಸ ಉತ್ಸಾಹವನ್ನು ತುಂಬಿತು ಎಂದ ಅವರು ತಮ್ಮ ಸಾರ್ವಜನಿಕ ಜೀವನದ ಅನುಭವಗಳನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಕೆ. ಅಭಯಚಂದ್ರ ಜೈನ್,ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ಹಾಗೂ ಎಸ್.ಎನ್.ಎಂ. ಪೊಲಿಟೆಕ್ನಿಕ್ ಪ್ರಾಂಶುಪಾಲೆ ನೊರೊನಾ ತರೀನಾ ರೀಟಾ, ಎ.ಜಿ. ಸೋನ್ಸ್ ಐಟಿಐ ಪ್ರಾಂಶುಪಾಲ ಶ್ರೀಕಾಂತ ಹೊಳ್ಳ, ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಧನಂಜಯ ಶೆಟ್ಟಿ ಹಾಗೂ ಉಪನ್ಯಾಸಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.