ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ದ.ಕ. ಜಿಲ್ಲಾ ಮಟ್ಟದ ಸಮಾಜಶಾಸ್ತ್ರ ಶೈಕ್ಷಣಿಕ ಕಾರ್ಯಾಗಾರ-2025
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಸಂತ ಫಿಲೋಮಿನಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ,
ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿದ ದ.ಕ. ಜಿಲ್ಲಾ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಅನುಸೂಯ ಕೆ.ಪಿ. ಮಾತನಾಡಿ, ವಿದ್ಯಾರ್ಥಿಗಳಿಗೆ ಮೌಲ್ಯಗಳು ಮತ್ತು ಜೀವನ ಕೌಶಲ್ಯಗಳನ್ನು ಬೋಧಿಸುವ ಮಹತ್ವವನ್ನು ಒತ್ತಿ ಹೇಳಿದರು. ಇದರಿಂದಾಗಿ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರುವಲ್ಲಿ ವಿದ್ಯಾರ್ಥಿಗಳು ಪ್ರಯತ್ನ ಮಾಡಬಹುದು. ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪದೋನ್ನತಿ ಹೊಂದಿದ ಕಾರ್ಕಳ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಅನ್ನಪೂರ್ಣ ಕಾಮತ್ ಹಾಗೂ ಕೊಕ್ರಾಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ನಾರ್ಬರ್ಟ್ ಮಾರ್ಟಿಸ್ ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ, ಉಪನ್ಯಾಸಕಿ ಜ್ಯೋತಿ ಇವರನ್ನು ಸನ್ಮಾನಿಸಲಾಯಿತು. 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸಮಾಜಶಾಸ್ತ್ರ ವಿಷಯದಲ್ಲಿ 100 ಅಂಕವನ್ನು ಪಡೆದ ಜಿಲ್ಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಪ.ಪೂ. ಕಾಲೇಜುಗಳ ಸಮಾಜಶಾಸ್ತ್ರ ಉಪನ್ಯಾಸಕರ ಸಂಘದ ಉಪಾಧ್ಯಕ್ಷ ಲಕ್ಷ್ಮೀಶ ಭಟ್, ಕೋಶಾಧಿಕಾರಿ ರೂಪ ಮತ್ತು ದ.ಕ. ಜಿಲ್ಲೆಯ ವಿವಿಧ ಪ.ಪೂ. ಕಾಲೇಜುಗಳ ಪ್ರಾಂಶುಪಾಲರು ಹಾಗೂ ಸಮಾಜಶಾಸ್ತ್ರ ಉಪನ್ಯಾಸಕರು ಉಪಸ್ಥಿತರಿದ್ದರು.
ಸಂತ ಫಿಲೋಮಿನಾ ಪ.ಪೂ. ಕಾಲೇಜಿನ ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ದ.ಕ. ಜಿಲ್ಲಾ ಪ.ಪೂ. ಕಾಲೇಜುಗಳ ಸಮಾಜಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷ ಶಿವರಾಮ ನಾಯ್ಕ ಕೆ. ಸ್ವಾಗತಿಸಿದರು. ದ.ಕ. ಜಿಲ್ಲಾ ಪ.ಪೂ. ಕಾಲೇಜುಗಳ ಸಮಾಜಶಾಸ್ತ್ರ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಮಧು ಎ.ಜೆ ವಂದಿಸಿ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕ ಜ್ಯೋತಿ ಕಾರ್ಯಕ್ರಮವನ್ನು ನಿರೂಪಿಸಿದರು.
.jpeg)
