ಫಿಲೋಮಿನಾದಲ್ಲಿ ಬಾಹ್ಯಾಕಾಶ ದಿನಾಚರಣೆ

ಫಿಲೋಮಿನಾದಲ್ಲಿ ಬಾಹ್ಯಾಕಾಶ ದಿನಾಚರಣೆ


ಪುತ್ತೂರು: ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಭೌತಶಾಸ್ತ್ರ ವಿಭಾಗ, ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ, ರಾಷ್ಟ್ರೀಯ ಬಾಹ್ಯಾಕಾಶ ದಿನ ‘ಆರ್ಯಭಟದಿಂದ ಗಗನಯಾನದವರೆಗೆ’ ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಮಂಗಳೂರಿನ ಯೆನೆಪೋಯ ನಿಸರ್ಗ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಹಾಗೂ ಹಿರಿಯ ವೈದ್ಯಾಧಿಕಾರಿಯಾದ ಡಾ. ಸಂಗೀತಲಕ್ಷ್ಮೀ ಎಂ.ಜೆ ಅವರು ಮಾತನಾಡಿ, ಮಕ್ಕಳು ಯಾವಾಗಲೂ ತಮ್ಮ ಸುತ್ತಮುತ್ತಲಿನ ಬಗ್ಗೆ ಕುತೂಹಲವನ್ನು ಬೆಳೆಸಿಕೊಳ್ಳಬೇಕು, ಅದು ನಮಗೆ ಶಾಂತ ಮತ್ತು ವಿನಮ್ರ ವ್ಯಕ್ತಿತ್ವ ನೀಡುತ್ತದೆ.  ಮಕ್ಕಳು ಭೌತಶಾಸ್ತ್ರದ ಬಗ್ಗೆ ಆಸಕ್ತಿಯನ್ನು ವೃದ್ಧಿಗೊಳಿಸಿ, ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧನೆಗೆ ಮುಂದಾಗಬೇಕು ಎಂದರು. 


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲರಾದ ಡಾ ವಿಜಯಕುಮಾರ ಮೊಳೆಯಾರ್ ಅವರು, ಪ್ರಾಚೀನ ಕಾಲದಿಂದ ಆಧುನಿಕ ಯುಗದವರೆಗೆ ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿನ ಸಾಧನೆಯನ್ನು ವಿವರಿಸಿದರು ಹಾಗೂ ರಾಷ್ಟ್ರದ ಸಮಗ್ರ ಅಭಿವೃದ್ಧಿ ಮತ್ತು ಬೆಳವಣಿಗೆಗೆ ಸಂಶೋಧನೆಯು ಬಹುಮುಖ್ಯವೆಂದರು. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ಉತ್ಸಾಹದಿಂದ ಭಾಗವಹಿಸಬೇಕು ಎಂದರು. 

ಕಾರ್ಯಕ್ರಮದಲ್ಲಿ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾದ ಡಾ ಚಂದ್ರಶೇಖರ್ ಕೆ ಹಾಗೂ ಭೌತಶಾಸ್ತ್ರ ಸ್ನಾತಕೋತ್ತರ ವಿಭಾಗ ಇದರ ಸಹಾಯಕ ಪ್ರಾಧ್ಯಾಪಕರಾದ ಸುಜಿತ್ ಎಸ್, ಇವರು ಉಪಸ್ಥಿತರಿದ್ದರು. 

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮವು ಮಾನಸ ಮತ್ತು ಬಳಗದವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಡಾ. ಕೆ. ಚಂದ್ರಶೇಖರ್ ಸ್ವಾಗತಿಸಿದರು. ಸುಜಿತ್ ಎಸ್, ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು, ಕೃತಿ ಎ, ಸಹಾಯಕ ಪ್ರಾಧ್ಯಾಪಕಿ ಭೌತಶಾಸ್ತ್ರ ಸ್ನಾತಕೋತ್ತರ ವಿಭಾಗ ವಂದಿಸಿದರು, ಸಹಾಯಕ ಪ್ರಾಧ್ಯಾಪಕಿಯಾದ ಪೂಜಾಶ್ರೀ ವಿ ರೈ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article