ಕೋಮು ವೈಷಮ್ಯ ಸಂದೇಶ: ಪ್ರಕರಣ ದಾಖಲು
Tuesday, August 5, 2025
ಪುತ್ತೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಕೋಮು ಸೌಹಾರ್ದಕ್ಕೆ ದಕ್ಕೆಯಾಗುವಂತಹ ಸಂದೇಶವನ್ನು ಹರಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಪ್ರಕರಣ ದಾಖಲಾಗಿದೆ.
ಫೇಸ್‌ಬುಕ್‌ನಲ್ಲಿ ಅಬ್ದುಲ್ ಕೆ. ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿಯ ವಿರುದ್ದ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈತ ತನ್ನ ಫೇಸ್‌ಬುಕ್ ಖಾತೆಯಲ್ಲಿ ಕೋಮು ಸೌಹಾರ್ದಕ್ಕೆ ದಕ್ಕೆಯಾಗುವಂತಹ ಹಾಗೂ ಇನ್ನೊಂದು ಸಮುದಾಯದ ವಿರುದ್ಧ ಅವಹೇಳನಕಾರಿ ಸಂದೇಶವನ್ನು ಪ್ರಸಾರ ಮಾಡಿರುವುದಾಗಿ ಆರೋಪಿಸಲಾಗಿದೆ.
ಈ ಫೇಸ್ ಬುಕ್ ಖಾತೆ ಹೊಂದಿರುವ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 67/2025, ಕಲಂ: 196(1) (a) 353(2)BNS 2023ರಂತೆ ಪ್ರಕರಣ ದಾಖಲಿಸಿಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.