ಯೋಗಾಸನ ರಾಜ್ಯಮಟ್ಟಕ್ಕೆ ಆಯ್ಕೆ
Saturday, August 23, 2025
ಪುತ್ತೂರು: ಕಿನ್ನಿಗೋಳಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮತ್ತು ದ.ಕ. ಜಿಲ್ಲಾ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ನಡೆಸಿದ ಜಿಲ್ಲಾ ಯೋಗಾಸನ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಬಿಬಿಎ ವಿದ್ಯಾರ್ಥಿ ನಿಖಿಲ್ ಬಿ.ಕೆ. ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಬಿ.ಬಿ.ಎ ವಿಭಾಗದ ವಿದ್ಯಾರ್ಥಿ ನಿಖಿಲ್ ಬಿ.ಕೆ., ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಿನ್ನಿಗೋಳಿಯವರ ಸಹಕಾರದೊಂದಿಗೆ ಅವರು, ಯುಗಪುರುಷ ಸಭಾಭವನ ಕಿನ್ನಿಗೋಳಿಯಲ್ಲಿ ನಡೆಸಿದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿ ಟ್ರೆಡಿಷನಲ್ ಮತ್ತು ಟ್ವಿಸ್ಟಿಂಗ್ ವಿಭಾಗದಲ್ಲಿ ಚಿನ್ನದ ಪದಕ ಗಳಿಸುವುದರೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಅವರನ್ನು ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆಂಟನಿ ಪ್ರಕಾಶ್ ಮೊಂತೆರೊ ಅವರು ಅಭಿನಂದಿಸಿದರು.