ಧರ್ಮಸ್ಥಳ ‘ಅಪಪ್ರಚಾರ’ ದೇವಳದಲ್ಲಿ ಶಿವ ಪಂಚಾಕ್ಷರಿ ಪಠಣ
ದೇವಾಲಯದಲ್ಲಿ ತಪ್ಪದ ದೀಪ ಹಚ್ಚಿ, ಮಹಾಲಿಂಗೇಶ್ವರನ ನಡೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ 108 ಸಾಮೂಹಿಕ ಶಿವ ಪಂಚಾಕ್ಷರಿ ಪಠಣ ಮಾಡಿದರು. ವೇದಮೂರ್ತಿ ವಿ.ಎಸ್. ಭಟ್ ಪ್ರಾರ್ಥನೆ ಸಲ್ಲಿಸಿದರು.
ವಿಶ್ವಹಿಂದು ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಅವರು ಮಾತನಾಡಿ, ರಾಜ್ಯದ ಹಿಂದೂ ಧಾರ್ಮಿಕ ತಾಣಗಳ ರಕ್ಷಣೆಗೆ ವಿಎಚ್‌ಪಿ ಸಂಕಲ್ಪ ಮಾಡಿದೆ. ಧರ್ಮಸ್ಥಳ ಕ್ಷೇತ್ರ ಬಗ್ಗೆ ಅಪಪ್ರಚಾರ, ಅವಹೇಳನ ನಿಲ್ಲಬೇಕು. ಸತ್ಯ-ಧರ್ಮಗಳಿಗೆ ಜಯಸಿಗಬೇಕು. ಈ ನಿಟ್ಟಿನಲ್ಲಿ ಸಾಮೂಹಿಕ ಪ್ರಾರ್ಥನೆ ಹಾಗೂ ಶಿವಪಂಚಾಕ್ಷರಿ ಪಠಣ ಒಂದು ವಾರಗಳ ತನಕ ನಡೆಯಲಿದೆ. ಹಿಂದೂ ಧಾರ್ಮಿಕ ತಾಣಗಳಿಗೆ ರಕ್ಷಣೆ ನೀಡಬೇಕು ಎಂದು ಅವರು ಆಗ್ರಹಿಸಿದರು.
ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಮಾಜಿ ಶಾಸಕ ಸಂಜೀವ ಮಠಂದೂರು, ವಿಶ್ವಹಿಂದು ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಯು. ಪೂವಪ್ಪ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಉಪಾಧ್ಯಕ್ಷ ವಿದ್ಯಾಧರ ಜೈನ್, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಉಪಾಧ್ಯಕ್ಷ ಸಂತೋಷ್ ರೈ ಕೈಕಾರ, ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಮುರಳಿಕೃಷ್ಣ ಹಸಂತಡ್ಕ, ನಗರ ಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು, ಸದಸ್ಯರಾದ ಜೀವಂಧರ್ ಜೈನ್, ದೀಕ್ಷಾ ಪೈ, ವಿಶ್ವಹಿಂದು ಪರಿಷತ್ ನಗರ ಪ್ರಖಂಡದ ಅಧ್ಯಕ್ಷ ದಾಮೋದರ ಪಾಟಾಳಿ, ಹಿಂದು ಜಾಗರಣಾ ವೇದಿಕೆ ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ, ಗ್ರಾಮಾಂತರ ಮಂಡಲದ ಮಾಜಿ ಅಧ್ಯಕ್ಷ ಅಪ್ಪಯ್ಯ ಮಣಿಯಾಣಿ, ಪ್ರಮುಖರಾದ ಸತೀಶ್ ನಾಕ್ ಪರ್ಲಡ್ಕ, ಯು. ಲೋಕೇಶ್ ಹೆಗ್ಡೆ, ರಾಜೇಶ್ ಬನ್ನೂರು, ಶಿವಶಂಕರ ಭಟ್, ರತ್ನಾಕರ ನಾಕ್, ನಿವೃತ್ತ ಎಸ್.ಐ. ರಾಮ ನಾಯ್ಕ, ಸೀತಾರಾಮ ರೈ ಕೆದಂಬಾಡಿಗುತ್ತು, ಪಿಎಲ್‌ಡಿ ಬ್ಯಾಂಕ್ ಕೋಶಾಧಿಕಾರಿ ಯುವರಾಜ ಪೆರಿಯತ್ತೋಡಿ ಉಪಸ್ಥಿತರಿದ್ದರು.