ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸ್ವಚ್ಛತೆ
ಧಾರ್ಮಿಕ ದತ್ತಿ ಇಲಾಖೆ ಒಳಪಟ್ಟ ಮುಜರಾಯಿ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಿದ್ದರು. ಆದರೂ ಪಕ್ಕದ ಪರಿಸರದಲ್ಲಿ, ಮಾರ್ಗದ ಬದಿ, ವಾಹನ ಪಾರ್ಕಿಂಗ್ ಬಳಿ, ಶೌಚಾಲಯದ ಬಳಿ ಹಾಗೂ ಇನ್ನಿತರ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಚೀಲಗಳು, ಪ್ಲಾಸ್ಟಿಕ್ ಬಾಟ್ಲುಗಳು, ಕಸ ಕಡ್ಡಿ ಹಾಗೂ ಇನ್ನಿತರ ಪ್ಲಾಸ್ಟಿಕ್‌ಗೆ ಸಂಬಂಧಿಸಿದ ವಸ್ತುಗಳು ಚಲ್ಲಾಪಿಲ್ಲಿಯಾಗಿ ಬಿದ್ದಿರುವುದನ್ನ ಮನಗಂಡ ಡಾ. ರವಿ ಕಕ್ಕೆ ಪದವ ಸಮಾಜ ಸೇವ ಟ್ರಸ್ಟ್ ಹಾಗೂ ಕುಕ್ಕೆಶ್ರೀ ಸೀನಿಯರ್ ಚೇಂಬರ್ ಅವರು ಜಂಟಿಯಾಗಿ ಪ್ರತಿ ಭಾನುವಾರದಂತೆ ಈ ದಿನ ಕುಮಾರ ಧಾರೆಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ತನಕ ರಸ್ತೆ ಬದಿ ಬಿದ್ದಿರುವ ಎಲ್ಲ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಒಟ್ಟುಗೂಡಿಸಿ ಕಸ ವಿಲೇವಾರಿಗೆ ಕಳುಹಿಸಲಾಯಿತು.
ಈ ಸೇವಾ ಕಾರ್ಯದಲ್ಲಿ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್‌ನ ಸುಮಾರು 50 ರಿಂದ 60 ಸ್ವಯಂಸೇವಕರು ಸೇವೆಯನ್ನು ಸಲ್ಲಿಸಿರುವರು. ಶ್ರೀ ದೇವಳದ ಸಮೀಪ ಸ್ವಚ್ಛತಾ ಕಾರ್ಯ ಮಾಡುತ್ತಿದ್ದಾಗ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಬಂದು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಶ್ಲಾಘನೆಯ ನುಡಿಗಳೊಂದಿಗೆ ಮುಂದಿನ ದಿನಗಳಲ್ಲಿ ನಾವು ಕೂಡ ನಿಮ್ಮೊಂದಿಗೆ ಸೇರಿಕೊಳ್ಳುತ್ತೇವೆ ಎಂಬ ಭರವಸೆಯನ್ನು ನೀಡಿರುವರು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯದ ಡಾ. ರವಿ ಪದವು ಸಮಾಜ ಸೇವಾ ಟ್ರಸ್ಟ್‌ನ ಸಂಸ್ಥಾಪಕ ಡಾ. ರವಿ ಕಕ್ಕೆ ಪದವು ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ಸ್‌ನ ಸ್ಥಾಪಕ ಅಧ್ಯಕ್ಷ ವಿಶ್ವನಾಥ ನಡುತೋಟ ಉಪಸ್ಥಿತರಿದ್ದರು.