ಕುಕ್ಕೆ ದೇವಳದಲ್ಲಿ ಹೊಸ್ತಾರೋಗಣೆ: ಕದಿರು ಕಟ್ಟುವುದು, ತೆನೆ ವಿತರಣೆ

ಕುಕ್ಕೆ ದೇವಳದಲ್ಲಿ ಹೊಸ್ತಾರೋಗಣೆ: ಕದಿರು ಕಟ್ಟುವುದು, ತೆನೆ ವಿತರಣೆ


ಸುಬ್ರಹ್ಮಣ್ಯ: ಪ್ರಸಿದ್ಧ ನಾಗಾರಾಧನೆಯ ಪುಣ್ಯಕ್ಷೇತ್ರ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಹೊಸ್ತಾರೋಗಣೆ ಮತ್ತು ಕದಿರು ಕಟ್ಟುವ ಕಾರ್ಯವು ವಿವಿಧ ವೈಧಿಕ ವಿದಿವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ಆದಿತ್ಯವಾರ ನೆರವೇರಿತು. ಈ ನಿಮಿತ್ತ ಪ್ರಾತಃಕಾಲ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಮೂಲ ವಿಗ್ರಹಕ್ಕೆ ಪಂಚಾಮೃಮಹಾಭಿಷೇಕವನ್ನು ಶ್ರೀ ದೇವಳದ ಪ್ರಧಾನ ಅರ್ಚಕ ವೇ.ಮೂ. ಸೀತಾರಾಮ ಎಡಪಡಿತ್ತಾಯರು ನೆರವೇರಿಸಿದರು.


ತೆನೆ ಮೆರವಣಿಗೆ:

ಅಭಿಷೇಕದ ಬಳಿಕ ತೆನೆ ತರಲು ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರು ದರ್ಪಣತೀರ್ಥ ನದಿ ತೀರಕ್ಕೆ ತೆರಳಿದರು. ಬತ್ತದ ತೆನೆಗೆ ದರ್ಪಣತೀರ್ಥ ನದಿಯ ತಟದಲ್ಲಿ ವಿವಿಧ ವೈದಿಕ ವಿದಿ ವಿಧಾನಗಳ ಮೂಲಕ ಪ್ರಧಾನ ಅರ್ಚಕರು ಪೂಜೆ ನೆರವೇರಿಸಿದರು. 


ಈ ಸಂದರ್ಭ ಶ್ರೀ ದೇವಳದ ಪುರೋಹಿತರು ಮಂತ್ರಘೋಷವನ್ನು ಮಾಡಿದರು. ಕ್ಷೇತ್ರ ಪುರೋಹಿತ ವೇದಮೂರ್ತಿ ಮದುಸೂಧನ ಕಲ್ಲೂರಾಯರು ನವಗ್ರಹ ಧಾನ ನೆರವೇರಿಸಿದರು. ಬಳಿಕ ಬತ್ತದ ತೆನೆಯನ್ನು ದೀವಟಿಗೆ, ಬ್ಯಾಂಡ್, ವಾದ್ಯದ ನಿನಾದದೊಂದಿಗೆ, ಆನೆ, ಬಿರುದಾವಳಿಗಳ ಮೂಲಕ ಮಂತ್ರಘೋಷದೊಂದಿಗೆ ಮೆರವಣಿಗೆಯಲ್ಲಿ ದೇವಳಕ್ಕೆ ತರಲಾಯಿತು. ಶ್ರೀ ದೇವಳಕ್ಕೆ ಒಂದು ಪ್ರದಕ್ಷಿಣೆ ಬಂದು ಅರ್ಚಕರು ತೆನೆಯನ್ನು ಗರ್ಭಗುಡಿಗೆ ಕೊಂಡೊಯ್ದರು. ನಂತರ ಶ್ರೀ ದೇವರ ಸನ್ನಿಧಿಯಲ್ಲಿ ಪ್ರಧಾನ ಅರ್ಚಕರು ಕದಿರು ಪೂಜೆ ನೆರವೇರಿಸಿದರು.ಬಳಿಕ ಶ್ರೀ ದೇವಳದ ಗರ್ಭಗುಡಿಗೆ ಕದಿರು ಕಟ್ಟಿದರು.


ಶ್ರೀ ದೇವಳದ ಗರ್ಭಗುಡಿಗೆ ಕೊರಳನ್ನು ಕಟ್ಟಿದ ಬಳಿಕ ಶ್ರೀ ದೇವಳದ ಪರಿವಾರ ಗುಡಿಗಳಿಗೆ, ದೇವಳದ ವಿವಿಧ ಭಾಗಗಳಿಗೆ ಕಟ್ಟಲು, ರಥಗಳಿಗೆ ಕಟ್ಟಲು ಗುರಿಕಾರರಿಗೆ, ಕಛೇರಿಗೆ ಕದಿರನ್ನು ಕಟ್ಟಲು ಮತ್ತು ದೇವಳದ ಆಡಳಿತ ವರ್ಗಗಳಿಗೆ ತೆನೆ ವಿತರಿಸಲಾಯಿತು. 

ತದನಂತರ ಅಲ್ಲಿ ಸೇರಿದ್ದ ಸಹಸ್ರಾರು ಭಕ್ತಾಧಿಗಳಿಗೆ ಅರ್ಚಕ ಸತ್ಯನಾರಾಯಣ ನೂರಿತ್ತಾಯರು ಕದಿರನ್ನು ವಿತರಿಸಿದರು. ಮಾರುದ್ದದ ಸರದಿಯ ಸಾಲಿನಲ್ಲಿ ನಿಂತು ಅಧಿಕ ಸಂಖ್ಯೆಯಲ್ಲಿ ಊರ ಭಕ್ತರು ಕದಿರ ಪ್ರಸಾದವನ್ನು ಸ್ವೀಕರಿಸಿದರು. ಬಳಿಕ ಹೊಸ್ತಾರೋಗಣೆಯ ಪ್ರಯುಕ್ತ ಶ್ರೀ ದೇವರಿಗೆ ಗರ್ಭಗುಡಿಯ ಎದುರಿನ ಮಂಟಪದಲ್ಲಿ ಪಂಚಾಮೃತ ಮಹಾಭಿಷೇಕ, ವಿಶೇಷ ಪೂಜೆ ಹಾಗೂ ನವಾನ್ನ ನೈವೇಧ್ಯ ಸಮರ್ಪಿತವಾಯಿತು. ಈ ಮೊದಲು ಶ್ರೀ ದೇವಳದಲ್ಲಿ ಮೂರು ತೆಂಗಿನ ಕಾಯಿ ಗಣಪತಿ ಹೋಮ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್. ಇಂಜಾಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ. ಯೇಸುರಾಜ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಸೌಮ್ಯಾ ಭರತ್, ಪ್ರವೀಣ ರೈ ಮರುವಂಜ, ಅಜಿತ್ ಕುಮಾರ್, ಲೀಲಾ ಮನಮೋಹನ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಲೋಲಾಕ್ಷ ಕೈಕಂಬ, ಅಚ್ಚುತ್ತ ಗೌಡ ಬಳ್ಪ, ಬ್ರಹ್ಮರಥ ದಾನಿ ಅಜಿತ್ ಶೆಟ್ಟಿ ಕಡಬ,  ಕೆ.ಎಂ. ಗೋಪಿನಾಥ್ ನಂಬೀಶ, ಶಿಷ್ಠಚಾರಾಧಿಕಾರಿ ಜಯರಾಮ ರಾವ್, ಹೆಬ್ಬಾರ್ ಪ್ರಸನ್ನ ಭಟ್ ಹಿರ್ತರಾ, ದೇವಳದ ಪಾಟಾಳಿ ಲೋಕೇಶ್ ಎ.ಆರ್ ಸೇರಿದಂತೆ ದೇವಳದ ಸಿಬ್ಬಂದಿಗಳು, ಭಕ್ತರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article