ದೇಶಕ್ಕಾಗಿ ನಾವೇನು ಮಾಡಬಹುದು ಎಂಬುದನ್ನು ಪ್ರತಿಯೊಬ್ಬರೂ ಯೋಚಿಸಬೇಕು: ಭಾಗೀರಥಿ ಮುರುಳ್ಯ

ದೇಶಕ್ಕಾಗಿ ನಾವೇನು ಮಾಡಬಹುದು ಎಂಬುದನ್ನು ಪ್ರತಿಯೊಬ್ಬರೂ ಯೋಚಿಸಬೇಕು: ಭಾಗೀರಥಿ ಮುರುಳ್ಯ


ಸುಳ್ಯ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಹಿರಿಯರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ ದೇಶಕ್ಕಾಗಿ ನಾವೇನು ಮಾಡಬಹುದು ಎಂಬುದನ್ನು ಪ್ರತಿಯೊಬ್ಬರೂ ಯೋಚನೆ ಮಾಡಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಹಶೀಲ್ದಾರ್ ಮಂಜುಳ ಎಂ, ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ದ.ಕ. ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಸುಳ್ಯ ತಾಲೂಕು  ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫ, ನಗರ ಪಂಚಾಯತ್ ಉಪಾಧ್ಯಕ್ಷ ಬುದ್ಧ ನಾಯ್ಕ್, ಎಒಎಲ್‌ಇ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ನ.ಪಂ. ಸದಸ್ಯರಾದ ವಿನಯಕುಮಾರ್ ಕಂದಡ್ಕ, ಎಂ.ವೆಂಕಪ್ಪ ಗೌಡ, ಕೆ.ಎಸ್.ಉಮ್ಮರ್, ಶೀಲಾ ಅರುಣ ಕುರುಂಜಿ, ಶೀಲ್ಪಾ ಸುದೇವ್,ಚ ಸುಶೀಲಾ ಜಿನ್ನಪ್ಪ, ಸುಧಾಕರ ಕೇರ್ಪಳ, ಧೀರಾ ಕ್ರಾಸ್ತಾ, ನಾರಾಯಣ ಶಾಂತಿನಗರ, ರಾಜು ಪಂಡಿತ್, ಸಿದ್ದಿಕ್ ಕೊಕ್ಕೊ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್, ಸರ್ಕಲ್ ಇನ್ಸ್‌ಪೆಕ್ಟರ್ ತಿಮ್ಮಪ್ಪ ನಾಯ್ಕ್, ನಗರ ಪಂಚಾಯತ್ ಮುಖ್ಯಾಧಿಕಾರಿ ಬಸವರಾಜ್, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನ್ ಗೌಡ ಬೊಮ್ಮೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. 

ನಿವೃತ್ತ ಸೈನಿಕರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷಯಲ್ಲಿ ಉನ್ನತ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ. ವಂದಿಸಿದರು. ಶಿಕ್ಷಕಿ ಚಂದ್ರಮತಿ.ಕೆ ಕಾರ್ಯಕ್ರಮ ನಿರೂಪಿಸಿದರು.

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಆಕರ್ಷಕ ಪಥ ಸಂಚಲನ ನಡೆಯಿತು. ಪೊಲೀಸ್, ಮಾಜಿ ಸೈನಿಕರ ಸಂಘ, ಗೃಹ ರಕ್ಷಕ ದಳ, ಎನ್‌ಸಿಸಿ, ಸ್ಕೌಟ್ಸ್ & ಗೈಡ್ಸ್, ಬುಲ್ ಬುಲ್ ತಂಡಗಳು ಹಾಗೂ ಶಾಲಾ ಮಕ್ಕಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article