ಅಕ್ರಮ ಕಲ್ಲು ಸಾಗಾಟ: ಪೊಲೀಸ್ ವಶಕ್ಕೆ

ಅಕ್ರಮ ಕಲ್ಲು ಸಾಗಾಟ: ಪೊಲೀಸ್ ವಶಕ್ಕೆ


ಸುಳ್ಯ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದಡಿ ನಾಲ್ಕು ಲಾರಿಗಳನ್ನು ಸುಳ್ಯ ಪೊಲೀಸರು ವಶ ಪಡಿಸಿಕೊಂಡ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ರವಿವಾರ ನಡೆದಿದೆ.

ಮಿಂಚಪದವಿನಿಂದ ಸುಳ್ಯದ ಕಡೆ ಬರುತ್ತಿದ್ದ ಲಾರಿಗಳಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸುಳ್ಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ಲಾರಿಗಳನ್ನು ವಶಪಡಿಸಿದ್ದು ಸುಳ್ಯ ಪೊಲೀಸ್ ಠಾಣೆಗೆ ತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article