ನಾಳೆ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ನಾಳೆ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು: ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಆ.23 ರಂದು 15 ಜೋಡಿಗಳ ಸರಳ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ.

ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಎಸ್‌ವೈಎಸ್ ದ.ಕ. ಜಿಲ್ಲಾ ಉಪಾಧ್ಯಕ್ಷ ಮೌಲಾನಾ ಸಿರಾಜುದ್ದೀನ್ ಸಖಾಫಿ ನಿಖಾಹ್ ನೇತೃತ್ವ ವಹಿಸಲಿದ್ದು, ಎಸ್‌ಕೆಎಸ್‌ಎಸ್‌ಎಫ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಅನೀಸ್ ಕೌಸರಿ ವಧು-ವರರಿಗೆ ಸಂದೇಶ ನೀಡಲಿದ್ದಾರೆ.

ಅಲ್ ವಫಾ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ ಮುಹಮ್ಮದ್ ಹನೀಫ್ ಗೋಳ್ತಮಜಲು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್, ಬಾವಾ ಫಿಶ್ ಮೀಲ್ ಆಂಡ್ ಆಯಿಲ್ ಕಂಪೆನಿಯ ಆಡಳಿತ ನಿರ್ದೇಶಕ ರಿಯಾಝ್ ಎ.ಕೆ. ಬಾವಾ, ಉದ್ಯಮಿ ವಿ.ಕೆ. ಅಬ್ದುಲ್ ಖಾದರ್ ಬದ್ರಿಯಾ, ಎಕ್ಸ್‌ಪರ್ಟೈಸ್ ಕಂಟ್ರಾಕ್ಟಿಂಗ್ ಕಂಪೆನಿಯ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕರ್ನೀರೆ ಹಾಗೂ ಜನಪ್ರಿಯ ಫೌಂಡೇಶನ್‌ನ ಅಧ್ಯಕ್ಷ ಡಾ. ಅಬ್ದುಲ್ ಬಶೀರ್ ವಿ.ಕೆ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಉಮರ್ ಯು.ಹೆಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article