
ನಕಲಿ ನಂಬರ್ ಪ್ಲೇಟ್ ಕಾರಿನಲ್ಲಿ ಅಕ್ರಮ ದನ ಸಾಗಾಟ: ವಿದ್ಯುತ್ ಕಂಬಕ್ಕೆ ಢಿಕ್ಕಿ
Wednesday, August 13, 2025
ಉಜಿರೆ: ಆ.13 ರಂದು ಬೆಳಗ್ಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿದ್ದ ಕೆಎ 19 ಎಂಪಿ 2084ನೇ ನೋಂದಣಿ ಸಂಖ್ಯೆಯ ಇನ್ನೋವಾ ಕಾರಿನಲ್ಲಿ, ಚಿಕ್ಕಮಗಳೂರಿನ ಮುಡಗೇರಿ ಎಂಬಲ್ಲಿಂದ ಮೂರು ದನಗಳನ್ನು ಅಕ್ರಮವಾಗಿ ಹಾಗೂ ಹಿಂಸಾತ್ಮಕವಾಗಿ ತುಂಬಿಸಿಕೊಂಡು, ಚಾರ್ಮಾಡಿ ಮೂಲಕ ಮಂಗಳೂರು ಕಡೆಗೆ ಅತೀವೇಗ ಹಾಗೂ ದುಡುಕುತನದಲ್ಲಿ ಚಲಾಯಿಸಿಕೊಂಡು ಹೋಗಿದ್ದು, ಮಾಹಿತಿ ಪಡೆದ ಬೆಳ್ತಂಗಡಿ ಠಾಣಾ ಪೊಲೀಸರು ಗುರುವಾಯನಕೆರೆಯಲ್ಲಿ ಕಾರನ್ನು ನಿಲ್ಲಿಸಲು ಸೂಚಿಸಿದರೂ ವಾಹನವನ್ನು ನಿಲ್ಲಿಸದೇ ಪರಾರಿಯಾಗುವ ಪ್ರಯತ್ನದಲ್ಲಿ ಒಂದು ಅಟೋರಿಕ್ಷಾ ಹಾಗೂ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ನಿಂತಿದೆ.
ಈ ವೇಳೆ ಪೊಲೀಸರನ್ನು ದೂಡಿಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿ ವಾಹನದಲ್ಲಿದ್ದ ಮೂವರು ಆರೋಪಿಗಳ ಪೈಕಿ ಇಬ್ಬರು ಪರಾರಿಯಾಗಿದ್ದು, ಕಾರನ್ನು ಚಲಾಯಿಸುತ್ತಿದ್ದ ಮೂಡಬಿದ್ರೆ ಸುವರ್ಣ ನಗರ ನಿವಾಸಿ ಆರಿಫ್ (26) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿರುತ್ತಾರೆ.
ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಕಂಡುಬಂದಿದ್ದು, ಪರಾರಿಯಾದ ಆರೋಪಿಗಳು ಮೂಡಬಿದ್ರೆ ಸುವರ್ಣ ನಗರ ನಿವಾಸಿಗಳಾಗಿದ್ದು ರಜ್ವಾನ್ (30) ಹಾಗೂ ಸಾಯಿಲ್ (22) ಎಂಬವರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.