ಸುಳ್ಳು ಮಾಹಿತಿ ಪ್ರಸಾರ ಮಾಡಿದ ವಕೀಲರ ವಿರುದ್ಧ ಪ್ರಕರಣ ದಾಖಲು
Sunday, August 24, 2025
ಉಜಿರೆ: ಎಸ್‌ಐಟಿ ತಂಡದಿಂದ ನಡೆಯುತ್ತಿರುವ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಮಂಜುನಾಥ ಎನ್. ಎಂಬ ವಕೀಲರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ಧರ್ಮಸ್ಥಳ ನಿವಾಸಿ ರಘುರಾಮ ಶೆಟ್ಟಿ (44) ಎಂಬವರು ನೀಡಿದ ದೂರಿನಂತೆ, ಆರೋಪಿ ವಕೀಲ ಮಂಜುನಾಥ ಎನ್. ಪ್ರಸ್ತುತ ಎಸ್‌ಐಟಿ ತಂಡದಿಂದ ನಡೆಯುತ್ತಿರುವ ಮೃತದೇಹಗಳ ಉತ್ಖನನ ಪ್ರಕ್ರಿಯೆಗೆ ಸಂಬಂಧಿಸಿದಂತೆ, ಜು.30 ರಂದು ತಾನು ಓರ್ವ ವಕೀಲನಾಗಿ, ಸಾರ್ವಜನಿಕರ ನೆಮ್ಮದಿಗೆ ದಕ್ಕೆಯಾಗುವಂತಹ ಹಾಗೂ ಭಯವುಂಟು ಮಾಡುವಂತಹ ಅನಧಿಕೃತ ಮಾಹಿತಿಗಳನ್ನು ಒಳಗೊಂಡಿರುವ ಸುಳ್ಳು ಪತ್ರಿಕಾ ಪ್ರಕಟಣೆಯನ್ನು ಪ್ರಸಾರ ಮಾಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗುವಂತೆ ಮಾಡಿದ ಹಿನ್ನೆಲೆಯಲ್ಲಿ, ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 96/2025, ಕಲಂ:353 (1)(b), 353 (2) ಬಿ.ಎನ್.ಎಸ್.ರಂತೆ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.