ಧರ್ಮಸ್ಥಳ: ಶಿವಪಂಚಾಕ್ಷರಿ ಪಠಣ
Sunday, August 24, 2025
ಉಜಿರೆ: ಧರ್ಮಸ್ಥಳದಲ್ಲಿ ಶನಿವಾರ ಪೂರ್ವಾಹ್ನ ಹತ್ತು ಗಂಟೆಯಿಂದ ಹನ್ನೆರಡು ಗಂಟೆ ವರೆಗೆ ಪ್ರವಚನ ಮಂಟಪದಲ್ಲಿ ಶಿವಪಂಚಾಕ್ಷರಿ ಪಠಣ ನಡೆಯಿತು.
ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ಕೃಷ್ಣ ಪಡ್ವೆಟ್ನಾಯ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಧರ್ಮಸ್ಥಳದ ಬಗ್ಗೆ ಆಗುತ್ತಿರುವ ವದಂತಿ ಹಾಗೂ ಅಪಪ್ರಚಾರ ತಡೆಗಟ್ಟಿ ಪ್ರಕರಣ ಶೀಘ್ರ ನ್ಯಾಯಯುತವಾಗಿ ಇತ್ಯರ್ಥವಾಗುವಂತೆ ಪ್ರಾರ್ಥಿಸಿ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು.


