ಉರುಳಿ ಬಿದ್ದ ಕಟ್ಟಿಗೆ ತುಂಬಿದ್ದ ಲಾರಿ
Thursday, August 7, 2025
ಉಳ್ಳಾಲ: ಕೋಟೆಪುರದ ಫಿಶ್ ಮೀಲ್ ಫ್ಯಾಕ್ಟರಿಯೊಂದಕ್ಕೆ ಭಾರೀ ಪ್ರಮಾಣದ ಕಟ್ಟಿಗೆ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ನಡು ರಸ್ತೆಯಲ್ಲೇ ಅಡ್ಡಲಾಗಿ ಉರುಳಿ ಬಿದ್ದ ಘಟನೆ ಉಳ್ಳಾಲ ಬೈಲಿನಲ್ಲಿ ಗುರುವಾರ ಮುಂಜಾನೆ ನಡೆದಿದೆ.
ಲಾರಿಯಲ್ಲಿ ಚಾಲಕನೋರ್ವನೇ ಇದ್ದು, ಆತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮುಂಜಾನೆ ಸುಮಾರು ಆರು ಗಂಟೆ ವೇಳೆಗೆ ಘಟನೆ ನಡೆದಿದ್ದು, ರಸ್ತೆಯಲ್ಲಿ ವಾಹನ ಮತ್ತು ಜನ ಸಂಚಾರ ಇಲ್ಲದೇ ಇದ್ದುದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಧಾವಿಸಿದ ಉಳ್ಳಾಲ ಮತ್ತು ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ರಸ್ತೆಗೆ ಬಿದ್ದಿದ್ದ ಕಟ್ಟಿಗೆಗಳನ್ನು ಪಿಕ್ ಅಪ್ ವಾಹನದಲ್ಲಿ ತುಂಬಿಸಿ ಸಾಗಿಸಿದ್ದು, ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದಿದ್ದ ಲಾರಿಯನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.