ಉಳ್ಳಾಲ ತಾಲೂಕು ಮಟ್ಟದ ಸ್ವಾತಂತ್ರ್ಯೋತ್ಸವ
ತಾಲೂಕು ತಹಶೀಲ್ದಾರ್ ಪ್ರಶಾಂತ್ ಪಾಟೀಲ್,ನಗರಸಭೆ ಅಧ್ಯಕ್ಷೆ ಶಶಿಕಲಾ ಧ್ವಜಾರೋಹಣ ನೆರವೇರಿಸಿದರು. ತಾಲೂಕು ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಮನ್ಸೂರ್ ಮಂಚಿಲ, ಸುರೇಶ್ ಭಟ್ನಗರ, ಪುರುಷೋತ್ತಮ ಶೆಟ್ಟಿ ಪಿಲಾರ್, ರಝಿಯಾ ಇಬ್ರಾಹಿಂ, ಮುಸ್ತಫಾ ಉಳ್ಳಾಲ್, ಜಬ್ಬಾರ್, ಮೋನು ಮಲಾರ್, ಪ್ರಕಾಶ್ ಕುಂಪಲ, ನಾಸೀರ್ ಸಾಮಣಿಗೆ, ಉಪ ತಹಶೀಲ್ದಾರ್ ವಿಜಯ್ ವಿಕ್ರಮ್, ಕಂದಾಯ ನಿರೀಕ್ಷಕ ಪ್ರಮೋದ್, ಆಹಾರ ನಿರೀಕ್ಷಕ ರಫೀಕ್, ಸಿಬ್ಬಂದಿ ಕಿರಣ್ ಕುಮಾರ್, ನಗರಸಭೆ ಉಪಾಧ್ಯಕ್ಷ ಸಪ್ನಾ ಹರೀಶ್, ಗ್ರಾಮಕರಣಿಕ ಸುರೇಶ್, ತೆರಿಗೆ ವಿಭಾಗದ ನಿರೀಕ್ಷಕ ಚಂದ್ರ ಹಾಸ್, ಕೋಟೆಕಾರ್ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾಲಿನಿ, ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮತ್ತಡಿ, ಶಿಕ್ಷಣಾಧಿಕಾರಿ ಈಶ್ವರ್, ತಾ.ಪಂ.ಇ.ಒ. ಗುರುದತ್, ಉಚ್ಚಿಲ ಪಿಎಂಶ್ರೀ ಶಾಲೆಯ ಮುಖ್ಯೋಪಾಧ್ಯಾಯ ಹರೀಶ್, ಚಂದ್ರ ಶೇಖರ ಮತ್ತಿತರರು ಉಪಸ್ಥಿತರಿದ್ದರು.
ತ್ಯಾಗಂ ಹರೇಕಳ, ಮೋಹನ್ ಶಿರ್ಲಾಲು, ಕೆಎಂಕೆ ಮಂಜನಾಡಿ ಕಾರ್ಯಕ್ರಮ ನಿರೂಪಿಸಿದರು. ನಗರಸಭೆ ಪೌರಾಯುಕ್ತ ನವೀನ್ ಹೆಗ್ಡೆ ವಂದಿಸಿದರು.